ಬೆಂಗಳೂರು: 2024 ರ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿರುವ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ನಾಳೆ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.
2023 ರ ವಿಧಾನಸಭೆ ಚುನಾವಣೆಯಲ್ಲಿ ಎಚ್.ಡಿ ಕುಮಾರಸ್ವಾಮಿ ಅವರು ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಇದೀಗ ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಭರ್ಜರಿ ಗೆಲುವು ಕಂಡು, ಕೇಂದ್ರದ ಮೋದಿ ಸಂಪುಟದಲ್ಲಿ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ಚನ್ನಪಟ್ಟಣ ಕ್ಷೇತ್ರದ ಶಾಸಕ ಸ್ಥಾನಕ್ಕೆ ನಾಳೆ(ಜೂ.15) ಎಚ್.ಡಿ ಕುಮಾರಸ್ವಾಮಿ ಅವರು ವಿಧಾನಸಭೆ ಸ್ಪೀಕರ್ ಅನ್ನು ಭೇಟಿ ಮಾಡಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…
ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…
ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್ ಅಹ್ಮಮದ್ ಖಾನ್ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.…
ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…
ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…
ಟೆಹರಾನ್: ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್ ಈಗ ಇರಾನ್ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…