ರಾಜ್ಯ

ನಾಳೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿರುವ ʼಎಚ್‌ಡಿಕೆʼ

ಬೆಂಗಳೂರು: 2024 ರ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿರುವ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ನಾಳೆ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.

2023 ರ ವಿಧಾನಸಭೆ ಚುನಾವಣೆಯಲ್ಲಿ ಎಚ್.ಡಿ ಕುಮಾರಸ್ವಾಮಿ ಅವರು ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಇದೀಗ ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಭರ್ಜರಿ ಗೆಲುವು ಕಂಡು, ಕೇಂದ್ರದ ಮೋದಿ ಸಂಪುಟದಲ್ಲಿ ಉಕ್ಕು ಮತ್ತು ಬೃಹತ್‌ ಕೈಗಾರಿಕೆ ಸಚಿವರಾಗಿದ್ದಾರೆ.

ಈ ಹಿನ್ನೆಲೆಯಲ್ಲಿ ಚನ್ನಪಟ್ಟಣ ಕ್ಷೇತ್ರದ ಶಾಸಕ ಸ್ಥಾನಕ್ಕೆ ನಾಳೆ(ಜೂ.15) ಎಚ್.ಡಿ ಕುಮಾರಸ್ವಾಮಿ ಅವರು ವಿಧಾನಸಭೆ ಸ್ಪೀಕರ್‌ ಅನ್ನು ಭೇಟಿ ಮಾಡಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಭಾನುವಾರವಾದರೂ ತಪ್ಪಿಸುವಂತಿಲ್ಲ: ನವೆಂಬರ್‌.1ರಂದು ಶಾಲೆಗಳಲ್ಲಿ ರಾಜ್ಯೋತ್ಸವ ಕಡ್ಡಾಯ

ಬೆಂಗಳೂರು: ನವೆಂಬರ್‌ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…

8 mins ago

ಗುಂಡ್ಲುಪೇಟೆ: ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ

ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…

30 mins ago

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…

1 hour ago

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

2 hours ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

2 hours ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

5 hours ago