ಹಾವೇರಿ: ಇಲ್ಲಿನ ಶಿಗ್ಗಾವಿ ಸಮೀಪದ ತಡಸ ಕ್ರಾಸ್ ಹತ್ತಿರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡೂ ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದ್ದು, ಸ್ಥಳದಲ್ಲೇ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ.
ಈ ಅಪಘಾತ ತಿಮ್ಮಾಪುರ ಗ್ರಾಮದ ಬಳಿ ಇಂದು(ಡಿಸೆಂಬರ್.25) ಮಧ್ಯಾಹ್ನ ಸಂಭವಿಸಿದ್ದು, ಬೆಂಗಳೂರು ಮೂಲದ ನಿವಾಸಿಗಳಾದ ತಂದೆ, ತಾಯಿ ಹಾಗೂ ಅವರ ಇಬ್ಬರ ಮಕ್ಕಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಅತಿ ವೇಗವಾಗಿ ಹೊರಟಿದ್ದ ಎರಡು ಕಾರುಗಳು ಮುಖಾಮಖಿ ಡಿಕ್ಕಿಯಾಗಿ ಅಪಾಘಾತಕ್ಕೀಡಾಗಿವೆ. ಹೀಗಾಗಿ ಒಂದು ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮರಣಹೊಂದಿದ್ದು, ಮತ್ತಿಬ್ಬರು ಗಾಯಗೊಂಡಿದ್ದರು. ಗಾಯಾಗೊಂಡ ಆ ಇಬ್ಬರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಅವರಿಬ್ಬರಿಗೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿಯೇ ಸಾವನ್ನಪ್ಪಿದ್ದಾರೆ.
ಇನ್ನು ಮತ್ತೊಂದು ಕಾರಿನಲ್ಲಿದ್ದ ಚಾಲಕ ಮತ್ತಿ ಇತತರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅಲ್ಲದೇ ಈ ಅಪಘಾತದಿಂದ ಒಂದು ಕಾರು ನಜ್ಜುಗುಜ್ಜಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.





