ರಾಜ್ಯ

ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಬೆಂಗಳೂರಿನ ನಾಲ್ವರು ಸಾವು

ಹಾವೇರಿ: ಇಲ್ಲಿನ ಶಿಗ್ಗಾವಿ ಸಮೀಪದ ತಡಸ ಕ್ರಾಸ್‌ ಹತ್ತಿರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡೂ ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದ್ದು, ಸ್ಥಳದಲ್ಲೇ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ.

ಈ ಅಪಘಾತ ತಿಮ್ಮಾಪುರ ಗ್ರಾಮದ ಬಳಿ ಇಂದು(ಡಿಸೆಂಬರ್‌.25) ಮಧ್ಯಾಹ್ನ ಸಂಭವಿಸಿದ್ದು, ಬೆಂಗಳೂರು ಮೂಲದ ನಿವಾಸಿಗಳಾದ ತಂದೆ, ತಾಯಿ ಹಾಗೂ ಅವರ ಇಬ್ಬರ ಮಕ್ಕಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಅತಿ ವೇಗವಾಗಿ ಹೊರಟಿದ್ದ ಎರಡು ಕಾರುಗಳು ಮುಖಾಮಖಿ ಡಿಕ್ಕಿಯಾಗಿ ಅಪಾಘಾತಕ್ಕೀಡಾಗಿವೆ. ಹೀಗಾಗಿ ಒಂದು ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮರಣಹೊಂದಿದ್ದು, ಮತ್ತಿಬ್ಬರು ಗಾಯಗೊಂಡಿದ್ದರು. ಗಾಯಾಗೊಂಡ ಆ ಇಬ್ಬರನ್ನು ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಅವರಿಬ್ಬರಿಗೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿಯೇ ಸಾವನ್ನಪ್ಪಿದ್ದಾರೆ.

ಇನ್ನು ಮತ್ತೊಂದು ಕಾರಿನಲ್ಲಿದ್ದ ಚಾಲಕ ಮತ್ತಿ ಇತತರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅಲ್ಲದೇ ಈ ಅಪಘಾತದಿಂದ ಒಂದು ಕಾರು ನಜ್ಜುಗುಜ್ಜಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಕಾರ್ಮಿಕನ ಮೇಲೆ ಕಾಡಾನೆ ದಾಳಿ : ಸ್ಥಳದಲ್ಲೇ ಸಾವು

ಹನೂರು : ಬಾಳೆಗೊನೆ ಕಟಾವು ಮಾಡಿ ಸ್ವಗ್ರಾಮಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕನ ಮೇಲೆ ಕಾಡಾನೆ ದಾಳಿಮಾಡಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿರುವ…

5 mins ago

ಮೈಸೂರು ಮೃಗಾಲಯದಲ್ಲಿ 9 ಮಂದಿ ಮಾತ್ರ ಖಾಯಂ ನೌಕರರಿದ್ದಾರೆ: ಸಚಿವ ಈಶ್ವರ್‌ ಖಂಡ್ರೆ

ಬೆಳಗಾವಿ: ಮೈಸೂರು ನಗರದಲ್ಲಿರುವ ಚಾಮರಾಜೇಂದ್ರ ಮೃಗಾಲಯದಲ್ಲಿ 356 ನೌಕರರು ಕಾರ್ಯ ನಿರ್ವಹಿಸುತ್ತಿದ್ದು, ಕೇವಲ 9 ಮಂದಿ ಮಾತ್ರ ಖಾಯಂ ನೌಕರರಾಗಿದ್ದಾರೆ…

1 hour ago

ವಿಪಕ್ಷಗಳ ವಿರೋಧದ ಮಧ್ಯೆ ವಿಧಾನಸಭೆಯಲ್ಲಿ ದ್ವೇಷ ಭಾಷಣ ಮಸೂದೆ ಅಂಗೀಕಾರ

ಬೆಂಗಳೂರು: ವಿಧಾನಸಭೆಯಲ್ಲಿ ವಿಪಕ್ಷಗಳ ತೀವ್ರ ವಿರೋಧ ಹಾಗೂ ಗದ್ದಲದ ಮಧ್ಯೆ ಕರ್ನಾಟಕ ದ್ವೇಷಭಾಷಣ ಹಾಗೂ ದ್ವೇಷಾಪರಾಧಗಳ ಪ್ರತಿಬಂಧನ ಮಸೂದೆ 2025ನ್ನು…

2 hours ago

ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ಧ: ಸಚಿವ ಕೃಷ್ಣಭೈರೇಗೌಡ

ಬೆಳಗಾವಿ: ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವ್ಯಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ…

2 hours ago

ಸಾರಿಗೆ ಸಿಬ್ಬಂದಿ ವೇತನ ಪರಿಷ್ಕರಣೆ ವಿಚಾರ: ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು.!

ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದಲ್ಲಿ ಸಾರಿಗೆ ಸಿಬ್ಬಂದಿ ವೇತನ ಪರಿಷ್ಕರಣೆ ಬಗ್ಗೆ ಪ್ರಸ್ತಾಪವಾಗಿದೆ. ಈ ಬಗ್ಗೆ ಸಾರಿಗೆ ಸಚಿವ…

2 hours ago

ಲೋಕಸಭೆಯಲ್ಲಿ ವಿ-ಬಿಜಿ ರಾಮ್‌ ಜಿ ಮಸೂದೆ ಅಂಗೀಕಾರ

ನವದೆಹಲಿ: ಲೋಕಸಭೆಯಲ್ಲಿ ವಿ-ಬಿಜಿ ರಾಮ್‌ ಜಿ ಮಸೂದೆ ಅಂಗೀಕಾರಗೊಂಡಿದೆ. ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಇಂದು ಲೋಕಸಭೆಯು ರೋಜ್‌ಗಾರ್‌ ಮತ್ತು ಅಜೀವಿಕಾ…

2 hours ago