ಕರ್ನಾಟಕದಲ್ಲಿ ಎಲ್ಲಾ ಬಗೆಯ ಹುಕ್ಕಾ ಉತ್ಪನ್ನಗಳ ಮಾರಾಟ, ಸೇವನೆ ಹಾಗೂ ಅವುಗಳ ಪರವಾಗಿ ಜಾಹೀರಾತು, ಸೇವನೆಗೆ ಪ್ರಚೋದನೆ ನೀಡುವುದನ್ನು ನಿಷೇಧಿಸಿ ಆರೋಗ್ಯ ಇಲಾಖೆ ಇಂದು ( ಫೆಬ್ರವರಿ 7 ) ಆದೇಶ ಹೊರಡಿಸಿದೆ.
ಸಾರ್ವಜನಿಕರ ಆರೋಗ್ಯ ಕಾಪಾಡಲು ಸಂವಿಧಾನದ 47ನೇ ವಿಧಿಯಲ್ಲಿ ಸರ್ಕಾರಕ್ಕೆ ಲಭ್ಯವಿರುವ ಅಧಿಕಾರವನ್ನು ಬಳಸಿ ಈ ಆದೇಶವನ್ನು ಹೊರಡಿಸಲಾಗಿದೆ. ತಂಬಾಕು ಹಾಗೂ ನಿಕೋಟಿನ್ ಒಳಗೊಂಡ ಹುಕ್ಕಾ, ತಂಬಾಕು ಹಾಗೂ ನಿಕೋಟಿನ್ ರಹಿತ ಹುಕ್ಕಾ, ಫ್ಲೇವರ್, ಮೊಲಾಸಿಸ್, ಶಿಶಾ ಇರುವ ಹೀಗೆ ಎಲ್ಲಾ ರೀತಿಯ ಹುಕ್ಕಾಗಳನ್ನೂ ಸಹ ನಿಷೇಧಿಸಲಾಗಿದೆ.
ಇನ್ನು ಈ ಆದೇಶವನ್ನು ಉಲ್ಲಂಘಿಸಿ ಹುಕ್ಕಾ ಸೇವನೆ ಮಾಡಿದರೆ ಅಂತಹವರ ವಿರುದ್ಧ ಸಿಗರೇಟು ಹಾಗೂ ತಂಬಾಕು ಉತ್ಪನ್ನಗಳ ಕಾಯ್ದೆ, ಮಕ್ಕಳ ಆರೈಕೆ ಮತ್ತು ರಕ್ಷಣ ಕಾಯ್ದೆ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ, ಕರ್ನಾಟಕ ವಿಷ ( ಸ್ವಾಧೀನ ಮತ್ತು ಮಾರಾಟ ) ಕಾಯ್ದೆ, ಭಾರತ ದಂಡ ಸಹಿತೆ ಹಾಗೂ ಅಗ್ನಿ ನಿಯಂತ್ರಣ ಮತ್ತು ಸುರಕ್ಷತಾ ಕಾಯ್ದೆಗಳ ಅಡಿಯಲ್ಲಿ ಕ್ರಮ ಕೈಗೊಳ್ಳುವುದಾಗಿ ಆರೋಗ್ಯ ಇಲಾಖೆ ಆದೇಶಿಸಿದೆ.
ವಿಶ್ ಆರೋಗ್ಯ ಸಂಸ್ಥೆ ಹುಕ್ಕಾವನ್ನು ವ್ಯಸನಕಾರಿ ಉತ್ಪನ್ನ ಎಂದಿದ್ದು, ಹುಕ್ಕಾ ಸೇವನೆ ಆರೋಗ್ಯಕ್ಕೆ ಹಾನಿಕರ, ಹುಕ್ಕಾ ಬಾರ್‌ಗಳು ಅಗ್ನಿ ಅನಾಹುತಕ್ಕೆ ಕಾರಣವಾಗುತ್ತಿವೆ. ಈ ಎಲ್ಲಾ ಕಾರಣಗಳಿಂದಾಗಿ ಹುಕ್ಕಾ ನಿಷೇಧಿಸಲಾಗಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ.
ಹೈದರಾಬಾದ್ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…
ಗ್ರಾಮಗಳಲ್ಲಿ ಉದ್ಯೋಗ ಸೃಷ್ಟಿ ಮಾಡಲಿ : ಖರ್ಗೆ ಬೆಂಗಳೂರು : ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಮಹಾತ್ಮ ಗಾಂಧೀಜಿ ಅವರ…
ಮುಂಬೈ : ಸಾಲು ಸಾಲು ಸೋಲುಗಳಿಂದ ನೆಲಕಚ್ಚಿದ್ದ ಬಾಲಿವುಡ್ ಇಂಡಸ್ಟ್ರಿಯ ಭವಿಷ್ಯವನ್ನೇ ದುರಂದರ ಸಿನಿಮಾ ಬದಲಿಸಿದೆ. ರಣವೀರ್ ಸಿಂಗ್ ನಟನೆಯ…
ಗುಂಡ್ಲುಪೇಟೆ : ತಾಲ್ಲೂಕಿನ ಬಂಡೀಪುರ ಅರಣ್ಯ ಇಲಾಖೆಯ ಮರಳಳ್ಳ ಕ್ಯಾಂಪ್ ಬಳಿ ಕರ್ತವ್ಯ ನಿರ್ವಹಿಸುತಿದ್ದ ಸಣ್ಣಹೈದ( ೫೫) ಹುಲಿ ದಾಳಿಗೆ…
ಬೆಂಗಳೂರು : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾನುವಾರ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿರುವ ಏಷ್ಯಾದ ಅತಿದೊಡ್ಡ ನೌಕಾನೆಲೆ ಐಎನ್…
ಮಡಿಕೇರಿ : ಕೊಡಗು ಜಿಲ್ಲೆಯಾದ್ಯಂತ ನಡೆದ ಲೋಕ್ ಅದಾಲತ್‌ನಲ್ಲಿ ಒಟ್ಟು 14,850 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ,…