ರಾಜ್ಯ

ದಿನಗೂಲಿ ನೌಕರರಿಗೂ ಆರೋಗ್ಯ ವಿಮಾ ಸೌಲಭ್ಯ

ಬೆಂಗಳೂರು : ಕರ್ನಾಟಕ ಸರ್ಕಾರವು ದಿನಗೂಲಿ ನೌಕರರು ಮತ್ತು ಅವರ ಅವಲಂಬಿತರಿಗೆ ವಾರ್ಷಿಕ 5 ಲಕ್ಷದವರೆಗೆ ನಗದು ರಹಿತ ಆರೋಗ್ಯ ವಿಮಾ ಸೌಲಭ್ಯವನ್ನು ವಿಸ್ತರಿಸುವ ಆದೇಶ ಹೊರಡಿಸಿದೆ.

ಹಿಂದಿನ ಆದೇಶದಂತೆ ಗುತ್ತಿಗೆ, ಹೊರಗುತ್ತಿಗೆ ಹಾಗೂ ಗೌರವಧನದ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರುವ ಸುಮಾರು 3 ಲಕ್ಷ ಸಿಬ್ಬಂದಿಗಳು ಮತ್ತು ಅವರ ಕುಟುಂಬಗಳಿಗೆ ಈ ಯೋಜನೆ ಜಾರಿಯಲ್ಲಿತ್ತು. ಇದೀಗ ದಿನಗೂಲಿ ನೌಕರರಿಗೂ ಅದೇ ಸೌಲಭ್ಯವನ್ನು ನೀಡಲು ಸರ್ಕಾರ ನಿರ್ಧರಿಸಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನ ಕಾರ್ಯದರ್ಶಿ ಪ್ರಭಾಕರ ಟಿ ಅವರು ಹೊರಡಿಸಿದ ಆದೇಶದಲ್ಲಿ, ದಿನಗೂಲಿ ನೌಕರರ ಸಂಘದ ಮನವಿಯನ್ನು ಪರಿಗಣಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿದೆ.

ಈ ಯೋಜನೆಯಡಿ ನೌಕರರಿಂದ ಮಾಸಿಕ ಕೊಡುಗೆ ಪಡೆಯಲಾಗುವುದು. ಉಳಿದ ಹಣವನ್ನು ರಾಜ್ಯ ಖಜಾನೆಯಿಂದ ಪಾವತಿಸಲಾಗುತ್ತದೆ. ಸರ್ಕಾರದ ವಿವಿಧ ಇಲಾಖೆಗಳಲ್ಲಿರುವ ಎಲ್ಲಾ ತಾತ್ಕಾಲಿಕ ಉದ್ಯೋಗಿಗಳಿಗೆ ಈ ಸೌಲಭ್ಯ ಅನ್ವಯವಾಗಲಿದೆ.

ಆಂದೋಲನ ಡೆಸ್ಕ್

Recent Posts

ಚಾ.ನಗರ | ಶೆಡ್‌, 4ಸಾವಿರ ಕೋಳಿ ಬೆಂಕಿಗಾಹುತಿ ; 25 ಲಕ್ಷ ನಷ್ಟ

ಚಾಮರಾಜನಗರ : ತಾಲೂಕಿನ ದೇವರಾಜಪುರ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಕೋಳಿ ಫಾರಂ ಶೆಡ್‌ಗೆ ಬೆಂಕಿ ತಗುಲಿ ಸುಮಾರು 4…

18 mins ago

ಸಿಎನ್‌ಜಿ ಸಮಸ್ಯೆ ಇಲ್ಲ : ಸಚಿವ ಮುನಿಯಪ್ಪ

ದಾವಣಗೆರೆ : ಆಟೋ ರಿಕ್ಷಾಗಳಿಗೆ ಅನಿಲ ಪೂರೈಕೆ ಸಮಸ್ಯೆ ಇಲ್ಲ, ಆದರೂ ವಿನಾಕಾರಣ ಆತಂಕಕ್ಕೊಳಗಾಗಿ ಕ್ಯೂ ನಿಲ್ಲಲಾಗುತ್ತಿದೆ ಎಂದು ಆಹಾರ…

37 mins ago

ಬಲಮುರಿ ಕಾವೇರಿ ನದಿಯಲ್ಲಿ ಮುಳುಗಿ ಯುವಕ ಸಾವು

ಶ್ರೀರಂಗಪಟ್ಟಣ : ಪ್ರವಾಸಕ್ಕೆ ಬಂದಿದ್ದ ಇನ್ಫೋಸಿಸ್ ಉದ್ಯೋಗಿಯೊಬ್ಬರು ಕಾವೇರಿ ನದಿಯಲ್ಲಿ ಈಜಲು ಹೋಗಿ ಮುಳುಗಿ ಸಾವನ್ನಪ್ಪಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ…

44 mins ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಹೈಕೋರ್ಟ್‌ ಅಸ್ತು

ಬೆಂಗಳೂರು : ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿ ಹಗರಣ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್…

1 hour ago

ಜನಗಣತಿಗೆ ಸ್ವಯಂ ಪ್ರೇರಿತರಾಗಿ ಮಾಹಿತಿ ನೀಡಿ ; ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ

ಮೈಸೂರು : ಜಿಲ್ಲೆಯಲ್ಲಿ ಏ.16 ರಿಂದ ಮೇ 15ರವರೆಗೆ ನಡೆಯುವ ಜನಗಣತಿಗೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಜನಗಣತಿಗೂ ಮುನ್ನ ‘ಸ್ವಯಂ…

1 hour ago

ರೈಲು ಪ್ರಯಾಣಿಕರಿಗೆ ಮತ್ತೊಂದು ಶಾಕ್

ಹೊಸದಿಲ್ಲಿ : ರೈಲು ಪ್ರಯಾಣ ಆರಂಭವಾಗುವ 8 ಗಂಟೆ ಮೊದಲು ನಿಮ್ಮ ಟಿಕೆಟ್ ರದ್ದುಪಡಿಸದಿದ್ದರೆ ಟಿಕೆಟ್‌ನ ಸಂಪೂರ್ಣ ಹಣ ಖೋತಾ…

2 hours ago