ಬೆಂಗಳೂರು: ದೇಶದಲ್ಲಿ ಒಂದೇ ಪಕ್ಷ, ಒಬ್ಬನೇ ನಾಯಕ. ಇನ್ಯಾರು ಇರಬಾರದು ಎಂದು ಸಚಿವ ದಿನೇಶ್ ಗುಂಡೂರಾವ್ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಸಿಎಂ ಸಿದ್ದರಾಮಯ್ಯ ವಿರುದ್ಧ ಉದ್ದೇಶಪೂರ್ವಕವಾಗಿ ಷಡ್ಯಂತ್ರ ಮಾಡಲಾಗುತ್ತಿದೆ. ಬಿಜೆಪಿಯವರು ವಾಮಮಾರ್ಗದಲ್ಲಿ ಅಧಿಕಾರಕ್ಕೆ ಬರಲು ಯತ್ನಿಸುತ್ತಿದ್ದಾರೆ. ಆದ್ರೆ ಅದು ಯಾವುದೇ ಕಾರಣಕ್ಕೂ ಫಲಿಸಲ್ಲ. ಒಂದೇ ಪಕ್ಷ, ಒಬ್ಬನೇ ನಾಯಕ, ಇನ್ಯಾರು ದೇಶದಲ್ಲಿರಬಾರದು. ಇದು ಕೇಂದ್ರ ಸರ್ಕಾರ ದ್ವೇಷ ರಾಜಕಾರಣ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು.
ಇನ್ನು ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣವನ್ನು ಸಿಬಿಐಗೆ ನೀಡಲು ಮುಂದಾಗಿರುವ ಕೇಂದ್ರ ಬಿಜೆಪಿ ಸರ್ಕಾರದ ನಡೆ ಖಂಡಿಸಿದ ಅವರು, ಸಿಎಂ ಸಿದ್ದರಾಮಯ್ಯ ವಿರುದ್ಧ ಉದ್ದೇಶಪೂರ್ವಕವಾಗಿ ಷಡ್ಯಂತ್ರ ಮಾಡಲಾಗುತ್ತಿದೆ. ಇದೆಲ್ಲಾ ಕೇಂದ್ರ ಸರ್ಕಾರ ದ್ವೇಷದ ರಾಜಕಾರಣದ ಭಾಗ. ಸಿಎಂ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ. ಕೇಂದ್ರ ಸರ್ಕಾರದ ಷಡ್ಯಂತ್ರವನ್ನು ಸಮರ್ಥವಾಗಿ ಎದುರಿಸುತ್ತೇವೆ ಎಂದು ಹೇಳಿದರು.
ಇನ್ನು ಬೆಳಗಾವಿ ಬಾಣಂತಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪ್ರತಿಯೊಂದು ಪ್ರಕರಣವನ್ನು ತನಿಖೆ ಮಾಡುತ್ತಿದ್ದೇವೆ. ಲೋಪದೋಷ ಸರಿಪಡಿಸುವ ಕೆಲಸ ಆಗುತ್ತಿದೆ. ಯಾವ ಪ್ರಕರಣವನ್ನೂ ಸುಮ್ಮನೆ ಬಿಡುತ್ತಿಲ್ಲ ಎಂದರು.