ರಾಜ್ಯ

ಕಟ್ಟಡ ಕಾರ್ಮಿಕರಿಗಾಗಿ ʼಸಂಚಾರಿ ಆರೋಗ್ಯ ಘಟಕʼ ಆಂಬುಲೆನ್ಸ್:‌ ಸಿಎಂ

ಬೆಂಗಳೂರು: ಬಸವಣ್ಣನವರ ಕಾಯಕ-ದಾಸೋಹ ಪರಿಕಲ್ಪನೆಯಲ್ಲಿ ಕಟ್ಟಡ ಕಾರ್ಮಿಕರ ಆರೋಗ್ಯದ ದೃಷ್ಠಿಯಿಂದ ಸಂಚಾರಿ ಆಸ್ಪತ್ರೆ ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಕಾರ್ಮಿಕರು ಕೆಲಸ ಮಾಡುವ ಸ್ಥಳಕ್ಕೆ ಹೋಗಿ ಆರೋಗ್ಯ ತಪಾಸಣೆ ನಡೆಸುವ 135 ʼಸಂಚಾರಿ ಆರೋಗ್ಯ ಘಟಕʼ ಆಂಬುಲೆನ್ಸ್‌ ವಾಹನಗಳನ್ನು ಸಿಎಂ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಿ ಮಾತನಾಡಿದರು.

ಇಡೀ ದೇಶ ಕಾರ್ಮಿಕರ ಶ್ರಮವನ್ನು ಅವಲಂಬಿಸಿದೆ. ಸಮಾಜದಲ್ಲಿ ದುಡಿಯುವ ವರ್ಗ ಒಂದು ಕಡೆ ಇದ್ದರೆ, ದುಡಿಸಿಕೊಳ್ಳುವ ವರ್ಗ ಮತ್ತೊಂದು ಕಡೆ ಇದೆ. ಒಂದೇ ವರ್ಗದವರು ದುಡಿಯುತ್ತಿರಬಾರದು, ಎಲ್ಲಾ ವರ್ಗದವರು ದುಡಿಯಬೇಕು. ಆಗ ಮಾತ್ರ ಬುದ್ಧ, ಬಸವ, ಅಂಬೇಡ್ಕರ್‌ ಅವರ ಆಶಯ ಸಾಧ್ಯ ಎಂದರು.

ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರ ಆಸಕ್ತಿಯಿಂದ ಉಚಿತ ಸಂಚಾರಿ ಆಸ್ಪತ್ರೆಗಳನ್ನು ಜಾರಿಗೊಳಿಸಲಾಗಿದೆ. ಕಾರ್ಮಿಕರ ಸೆಸ್‌ ಹಣದಿಂದ ಕಾರ್ಮಿಕ ಕಲ್ಯಾಣ ಮಂಡಳಿ ಸುಸಜ್ಜಿತ ಸರ್ಕಾರಿ ಆಸ್ಪತ್ರೆಗಳನ್ನು ಲೋಕಾರ್ಪಣೆಗೊಳಿಸಲಾಗಿದೆ ಎಂದರು.

ಕಾರ್ಮಿಕರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂದು ಸರ್ಕಾರ ಉಚಿತ ಊಟ ಮತ್ತು ವಸತಿ ಶಾಲೆಗಳನ್ನು ತೆರೆಯಲಿದೆ. ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಆಕಸ್ಮಿಕ ಬೆಂಕಿ : ಒಕ್ಕಣೆ ಕಣದ ರಾಗಿ ಫಸಲು ನಾಸ

ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್…

3 hours ago

ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರು-ಪೇರು ; ಸದನ ಕಲಾಪಗಳಿಂದ ದೂರ ಉಳಿದ ಸಿಎಂ

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರು ಆದ ಕಾರಣ, ಇಂದು (ಡಿಸೆಂಬರ್ 17) ವಿಧಾನಸಭೆ ಅಧಿವೇಶನದಲ್ಲಿ…

3 hours ago

ಶ್ರೀಕಂಠೇಶ್ವರ ದೇವಾಲಯದಲ್ಲಿ ಅಕ್ರಮ?; ತನಿಖೆ ಆರಂಭಿಸಿದ ಎಸಿ ತಂಡ

ನಂಜನಗೂಡು : ದಕ್ಷಿಣ ಕಾಶಿ ಎಂದೇ ಹೆಸರಾಗಿರುವ, ಆದಾಯದಲ್ಲಿ ರಾಜ್ಯದಲ್ಲಿ ಐದನೇ ಸ್ಥಾನದಲ್ಲಿರುವ ನಂಜನಗೂಡು ಶ್ರೀಕಂಠೇಶ್ವರ ದೇವಾಯದಲ್ಲಿ ಲಕ್ಷಾಂತರ ರೂ.…

3 hours ago

ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’…

3 hours ago

ಧರ್ಮಸ್ಥಳ ಪ್ರಕರಣ : ಚಿನ್ನಯ್ಯಗೆ ಕೊನೆಗೂ ಬಿಡುಗಡೆ ಭಾಗ್ಯ

ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದಿಂದ ಬಂಧನಕ್ಕೆ ಒಳಗಾದ ಚಿನ್ನಯ್ಯ ಕೊನೆಗೂ…

3 hours ago

ಕೈಗಾರಿಕೆ ಸ್ಥಾಪನೆಗೆ 500 ಎಕರೆ ಜಾಗ ಕೊಡುತ್ತೇನೆ : ಎಚ್‌ಡಿಕೆ ಯಾವ ಕೈಗಾರಿಕೆ ತರುತ್ತಾರೋ ತರಲಿ : ಶಾಸಕ ನರೇಂದ್ರಸ್ವಾಮಿ ಸವಾಲು

ಮಂಡ್ಯ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಯಾವ ಕೈಗಾರಿಕೆಯನ್ನು ತರುವರೋ ತರಲಿ. ಮಳವಳ್ಳಿ ಕ್ಷೇತ್ರದಲ್ಲಿ 400ರಿಂದ 500 ಎಕರೆ…

3 hours ago