ರಾಜ್ಯ

ನಿಲ್ಲದ ಹೃದಯಾಘಾತ ಪ್ರಕರಣ: ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬಂದಿದ್ದ ಚಾಮರಾಜನಗರ ರೈತ ಸಾವು

ಬೆಂಗಳೂರು: ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ಮುಂದುವರೆದಿದ್ದು, ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬಂದಿದ್ದ ಅನ್ನದಾತರೊಬ್ಬರು ಹೃದಯಾಘಾತದಿಂದ ನಗರದಲ್ಲಿ ಮೃತಪಟ್ಟಿದ್ದಾರೆ.

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲ್ಲೂಕಿನ ಕುರುಬರ ಹುಂಡಿ ಗ್ರಾಮದ ನಿವಾಸಿ ಈಶ್ವರ್(50) ಎಂಬುವವರೇ ಮೃತಪಟ್ಟ ಅನ್ನದಾತನಾಗಿದ್ದಾರೆ.

ದೇವನಹಳ್ಳಿ ತಾಲ್ಲೂಕಿನ ಚೆನ್ನರಾಯಪಟ್ಟಣದಲ್ಲಿ ಕೆಐಎಡಿಬಿಯಿಂದ ಬಲವಂತದ ಭೂಸ್ವಾಧೀನ ಮಾಡುತ್ತಿರುವುದನ್ನು ವಿರೋಧಿಸಿ ರೈತ ಸಂಘಟನೆಗಳು ಕರೆ ನೀಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಚಾಮರಾಜನಗರದಿಂದ ಮೈಸೂರಿಗೆ ಬಂದು ಮೈಸೂರಿನಿಂದ ಬೆಂಗಳೂರಿಗೆ ಈಶ್ವರ್ ಅವರು ಇಂದು ಬೆಳಗ್ಗೆ ರೈಲಿನಲ್ಲಿ ಆಗಮಿಸಿದ್ದರು.

ರೈಲು ನಿಲ್ದಾಣದಿಂದ ನಗರದ ಫ್ರೀಡಂ ಪಾರ್ಕ್‍ಗೆ ತೆರಳುತ್ತಿದ್ದಾಗ ಮಾರ್ಗಮಧ್ಯೆ ಮೆಜೆಸ್ಟಿಕ್‍ನ ಸಂಗೊಳ್ಳಿರಾಯಣ್ಣ ಸರ್ಕಲ್ ಬಳಿ ಈಶ್ವರ್ ಅವರಿಗೆ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಸಮೀಪದ ಶೇಷಾದ್ರಿಪುರಂ ಅಪೋಲೋ ಆಸ್ಪತ್ರೆಗೆ ದಾಖಲಿಸಿದರಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

ಈಶ್ವರ್ ಅವರಿಗೆ ಮಧುಮೇಹ ಹಾಗೂ ಬಿಪಿ ಇತ್ತು ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಈ ಬಗ್ಗೆ ಕಾಟನ್‍ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಶಾಲಾ ದಾಖಲಾತಿ ವಯೋಮಿತಿ ಸಮಸ್ಯೆ ನಿವಾರಿಸಿ

ಮಕ್ಕಳನ್ನು ಒಂದನೇ ತರಗತಿಗೆ ಪ್ರಸಕ್ತ ಸಾಲಿಗೆ ದಾಖಲಿಸುವ ವಯೋಮಿತಿಯನ್ನು ಆರು ವರ್ಷಗಳಿಗೆ ನಿಗದಿಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.…

3 hours ago

ಓದುಗರ ಪತ್ರ: ಡ್ರಗ್ಸ್ ಜಾಲ ಪತ್ತೆಗೆ ಡ್ರೋನ್ ಕಾರ್ಯಾಚರಣೆ ಶ್ಲಾಘನೀಯ

ಮೈಸೂರಿನಲ್ಲಿ ಸಮಾಜಘಾತುಕ ಶಕ್ತಿಗಳ ದುಷ್ಕೃತ್ಯ ಮತ್ತು ಡ್ರಗ್ಸ್ ಜಾಲ ಪ್ರಕರಣಗಳ ಪತ್ತೆಗೆ ಡ್ರೋನ್ ಕಾರ್ಯಾಚರಣೆ ನಡೆಸಲು ಮೈಸೂರು ನಗರ ಪೊಲೀಸರು…

3 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಸರ್ಕಾರ ಗುಣಮಟ್ಟದ ಚಲನಚಿತ್ರಗಳಿಗೆ ನೀಡುವ ಸಹಾಯಧನದ ಆಚೆ ಈಚೆ

ಗುಣಮಟ್ಟದ ಕನ್ನಡ ಮತ್ತು ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಸರ್ಕಾರ ನೀಡುತ್ತಿರುವ ಸಹಾಯಧನವನ್ನು ೨೦೨೬ನೇ ಸಾಲಿನಿಂದ ರದ್ದುಪಡಿಸಲು ಸರ್ಕಾರ ನಿರ್ಧರಿಸಿದೆ ಎನ್ನುವುದು…

3 hours ago

ಅಮೃತ್ ೨.೦ ಯೋಜನೆ ಕಾಮಗಾರಿ ಚುರುಕು

ಎಸ್.ಎ. ಹುಸೇನ್ ಶೀಘ್ರದಲ್ಲೇ ಹೊಸ ಪೈಪ್‌ಲೈನ್ ಮೂಲಕ ನೀರು ಸರಬರಾಜು ೪೭.೪೧ ಕೋಟಿ ರೂ. ವೆಚ್ಚದ ೨ ಹಂತಗಳ ಕಾಮಗಾರಿ…

3 hours ago

ಸಫಾರಿಗೆ ರಹದಾರಿ; ವಾದ-ಪ್ರತಿರೋಧ

ಸಫಾರಿ ಪುನಾರಂಭಕ್ಕೆ ಸರ್ಕಾರದ ಆದೇಶ ಹೊರ ಬಿದ್ದ ಬಳಿಕ ರೈತ ಸಂಘಟನೆಗಳ ಆಕ್ರೋಶ ಭುಗಿಲೆದಿದ್ದೆ. ಅಧಿಕಾರಿಗಳು, ಸರ್ಕಾರದ ವಿರುದ್ಧ ರೈತ…

3 hours ago

ದಮ್ಮನಕಟ್ಟೆ ಸಫಾರಿ ಸವಿಯಲು ಪ್ರವಾಸಿಗರು ಕಾತರ…

ಮಂಜು ಕೋಟೆ ಆದೇಶ ಬಂದ ತಕ್ಷಣ ಸಫಾರಿ ಪುನರ್ ಆರಂಭಿಸಲಾಗುವುದು: ಅರಣ್ಯಾಧಿಕಾರಿ ಎಚ್.ಡಿ.ಕೋಟೆ: ರಾಜ್ಯ ಸರ್ಕಾರವು ಸಫಾರಿ ಆರಂಭಕ್ಕೆ ಆದೇಶ…

4 hours ago