ರಾಜ್ಯ

ಹೃದಯಘಾತದ ಸಾವು ಹೆಚ್ಚಾಗಿಲ್ಲ | ಆತಂಕಪಡುವ ಅಗತ್ಯವಿಲ್ಲ ; ಸಚಿವ ಶರಣ್‌ ಪ್ರಕಾಶ್‌ ಪಾಟೀಲ್‌

ಬೆಂಗಳೂರು : ರಾಜ್ಯದಲ್ಲಿ ಈಗ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಜನರು ಆತಂಕ ಪಡುವ ಅಗತ್ಯವಿಲ್ಲ. ಸರಾಸರಿ ಹೃದಯಾಘಾತದ ಪ್ರಕರಣಗಳು ಕಳೆದ ವರ್ಷದಷ್ಟೇ ಇದೆ ಎಂದು ವೈದ್ಯಕೀಯ ಶಿಕ್ಷಣ, ಸಚಿವ ಡಾ. ಶರಣ್ ಪ್ರಕಾಶ್ ಆರ್‌. ಪಾಟೀಲ್ ತಿಳಿಸಿದರು.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರೊಂದಿಗೆ ವಿಕಾಸ ಸೌಧದಲ್ಲಿ ಜಂಟಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಚಿವರು, ಸರ್ಕಾರ ಈ ವಿಷಯದಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳುತ್ತಿದೆ. ಜನರು ಆತಂಕಪಡಬಾರದು ಎಂದು ತಿಳಿಸಿದರು.

ಹಾಸನದಲ್ಲಿ ಹೃದಯಾಘಾತ ಪ್ರಕರಣ ಹೆಚ್ಚುತ್ತಿವೆ ಎನ್ನುವ ಸುದ್ದಿ ಕೇಳಿ ಜಯದೇವ ಆಸ್ಫತ್ರೆ ಸೇರಿದಂತೆ ಅನೇಕ ಆಸ್ಫತ್ರೆಗಳಲ್ಲಿ ರೋಗಿಗಳ ಸಂಖ್ಯೆ ಮತ್ತು ಮುಂಜಾಗ್ರತೆ ಕ್ರಮ ತೆಗೆದುಕೊಳ್ಳುವವರ ಸಂಖ್ಯೆಯೂ ಗಣನೀಯವಾಗಿ ಏರಿಕೆಯಾಗಿದೆ. ಇದರಿಂದ ವಿಚಿತ್ರ ಸನ್ನಿವೇಶ ಎದುರಾಗುತ್ತಿದೆ ಎಂದು ಸಚಿವರು ತಿಳಿಸಿದರು.

ಕೋವಿಡ್ ಲಸಿಕೆಗೂ ಹಾಸನದಲ್ಲಿ ಸಂಭವಿಸಿದ ಹೃದಯಾಘಾತ ಪ್ರಕರಣಗಳಿಗೂ ಯಾವುದೇ ಸಂಬಂಧವಿಲ್ಲ. ವ್ಯಾಕ್ಸಿನ್ ಬಗ್ಗೆ ಅನುಮಾನ ಬೇಡ. ಹಾಸನ ಜಿಲ್ಲೆಯಲ್ಲಿ ಮಾತ್ರ ಪ್ರಕರಣ ಬೇರೆ ಆಗಿದೆ ಅನ್ನೋದು ತಪ್ಪು ಎಂದು ಡಾ. ಪಾಟೀಲ್‌ ವಿವರಿಸಿದರು.

ಹೃದಯಾಘಾತದ ಆತಂಕ ಕೈಬಿಟ್ಟು ಉತ್ತಮ ಜೀವನಶೈಲಿ, ಅಗತ್ಯ ನಿದ್ರೆ ಮತ್ತು ದೈಹಿಕ ವ್ಯಾಯಾಮ ಮಾಡುವುದು ಅಗತ್ಯ. ಹೃದಯಾಘಾತದ ರೋಗ ಲಕ್ಷಣಗಳು ಇದ್ದರೆ ಮಾತ್ರ ಆಸ್ಪತ್ರೆಗೆ ಹೋಗಿ ತಪಾಸಣೆ ಮಾಡಿಸಿಕೊಳ್ಳಿ. ಸುಖಾಸುಮ್ಮನೆ ಹೋಗಬೇಡಿ, ಎಂದು ಸಚಿವರು ಕಿವಿಮಾತು ಹೇಳಿದರು.

ಹಾಸನ ಪ್ರಕರಣ ಕುರಿತು ಅಧ್ಯಯನ: ಹಾಸನ ಪ್ರಕರಣದಲ್ಲಿ 24 ಮಂದಿ ಮೃತರ ಕುರಿತು ಅಧ್ಯಯನ ನಡೆಸಲಾಗುತ್ತಿದೆ. 20 ಪ್ರಕರಣಗಳಲ್ಲಿ 10 ಹಾರ್ಟ್ ಅಟ್ಯಾಕ್ ಆಗಿದೆ. ಇತರೆ ಕಾರಣಗಳಿಂದ ಸಾವು ಸಂಭವಿಸಿವೆ ಎನ್ನುವುದು ಪ್ರಾಥಮಿಕ ವರದಿಗಳಿಂದ ತಿಳಿದುಬಂದಿದೆ ಎಂದು ಪಾಟೀಲರು ಹೇಳಿದರು.

ಜಯದೇವ ಆಸ್ಫತ್ರೆಗಳಲ್ಲಿ ಹೃದ್ರೂಗ ತಜ್ಞ ಡಾ ಕೆ. ಎಸ್. ರವೀಂದ್ರನಾಥ್ ಅವರ ನೇತೃತ್ವದಲ್ಲಿ ಅನಾಲಿಸಿಸ್ ಆಗಿದ್ದು. ಹೃದಯಾಘಾತ ಸಂಬಂಧ ಸಾವು ಹೆಚ್ಚಾಗಿಲ್ಲ. ಈ ಹಿಂದೆ ಆಗ್ತಾ ಇತ್ತು. ಈಗಲೂ ಆಗ್ತಾ ಇದೆ ಎಂದು ವಿವರಿಸಿದರು.

ಕೋವಿಡ್‌ ನಂತರ ಜನರ ಜೀವನ ಶೈಲಿ ಬದಲು: ಕೋವಿಡ್‌ ನಂತರದ ಜೀವನ ಶೈಲಿಯಿಂದ ಡಯಾಬಿಟಿಸ್ , ಬಿಪಿ ಹೆಚ್ಚಾಗಿದೆ. ಆಹಾರ ಪದ್ದತಿ ಬದಲಾಗಿದೆ, ಒತ್ತಡ ಜಾಸ್ತಿ ಆಗಿದೆ. ಈ ಮಧ್ಯೆ ಯುವಕರಲ್ಲಿ ಯಾಕೆ ಸಾವು ಆಗ್ತಿದೆ ಅಂತ ಅಧ್ಯಯನ ಮಾಡುತ್ತಿದ್ದೇವೆ ಎಂದು ಡಾ. ಪಾಟೀಲ್‌ ತಿಳಿಸಿದರು.

ಜನವರಿಯಲ್ಲಿ 178 ಜನರು ಅಡ್ಮಿಟ್ ಆಗಿದ್ದರು 11 ಜನ ಮೃತಪಟ್ಟಿದ್ದಾರೆ. ಫೆಬ್ರವರಿಯಲ್ಲಿ 181 ಜನರ ಪೈಕಿ 10 ಜನ, ಮಾರ್ಚ್‌ನಲ್ಲಿ 200 ಜನರಲ್ಲಿ 9 ಜನ ಹಾಗೂ ಬೆಂಗಳೂರಲ್ಲಿ 2165ರು ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಈ ಪೈಕಿ 101 ಜನ ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದರು.

ವರ್ಷಕ್ಕೆ ಒಂದು ಬಾರಿ ಹೃದಯ ತಪಾಸಣೆ ಮಾಡಿಸಿದರೆ ಸಾಕು. ಆತಂಕದಿಂದ ಆಸ್ಪತ್ರೆಗೆ ಹೋಗೋದು ಬೇಡ ಎಂದು ಸಚಿವ ಡಾ. ಪಾಟೀಲ್‌ ತಿಳಿಸಿದರು.

ಅರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಮಕ್ಕಳಲ್ಲಿ ಸ್ಕ್ರೀನಿಂಗ್ ಮಾಡುವ ಆಗತ್ಯವಿಲ್ಲ. ಜನರಿಗೆ ಜಯದೇವ ಆಸ್ಪತ್ರೆಯಿಂದ ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸುತ್ತೇವೆ. ರಸ್ತೆ ಬದಿ ಆಹಾರ ಮತ್ತು ಆಹಾರ ತಯಾರಿಸುವ ವಿಧಾನದ ಬಗ್ಗೆ ಕಟ್ಟುನಿಟ್ಟಿನ ಕ್ರಮವಹಿಸುತ್ತಿದ್ದೇವೆ ಎಂದರು.

ಈ ಹಿಂದಿನ ಆಹಾರ ಪದ್ದತಿ ಮುಂದುವರಿಸಿ. ಯೋಗ ಅಭ್ಯಾಸ ಮಾಡಿದರೆ ತುಂಬಾ ಉತ್ತಮ, ಎಂದು ದಿನೇಶ್‌ ಗುಂಡೂರಾವ್‌ ಹೇಳಿದರು.

ಈ ಸಂದರ್ಭದಲ್ಲಿ ಜಯದೇವ ಆಸ್ಪತ್ರೆಯ ಹೃದಯ ತಜ್ಞರಾದ ಡಾ ಕೆ. ಎಸ್. ರವೀಂದ್ರನಾಥ್, ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೋಷಿನ್, ಇಲಾಖೆ ನಿರ್ದೇಶಕಿ ಡಾ. ಬಿ.ಎಲ್. ಸುಜಾತಾ ರಾಥೋಡ್ ಹಾಗೂ ಇತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಬಿಜೆಪಿಗೆ ಮರಳುವ ಚಿಂತನೆ ಮಾಡಿಲ್ಲ: ಎಸ್.ಟಿ.ಸೋಮಶೇಖರ್‌

ಬೆಂಗಳೂರು: ನಾನು ಬಿಜೆಪಿಗೆ ಮರಳುವ ಚಿಂತನೆ ಮಾಡಿಲ್ಲ. ಕಾಂಗ್ರೆಸ್‌ಗೆ ಹೋಗುತ್ತೇನೆ ಎಂದು ಶಾಸಕ ಎಸ್.ಟಿ.ಸೋಮಶೇಖರ್‌ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

3 seconds ago

ಬಿಹಾರದ ನಳಂದಾ ದೇಗುಲದಲ್ಲಿ ಕಾಲ್ತುಳಿತ: 8 ಮಂದಿ ಸಾವು

ನಳಂದಾ: ಬಿಹಾರದ ನಳಂದಾ ಜಿಲ್ಲೆಯ ಶೀತಲಾ ದೇವಸ್ಥಾನದ ಧಾರ್ಮಿಕ ಸಮಾರಂಭವೊಂದರಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಂದಿ ಮಹಿಳೆಯರು ಸಾವನ್ನಪ್ಪಿದ್ದಾರೆ.…

14 mins ago

ಕೌಟುಂಬಿಕ ಕಲಹ: ಬೆಂಗಳೂರಿನಲ್ಲಿ ಟೆಕ್ಕಿ ದಂಪತಿ ಆತ್ಮಹತ್ಯೆ

ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಟೆಕ್ಕಿ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊತ್ತನೂರು ಪೊಲೀಸ್‌ ಠಾಣೆ ವ್ಯಾಪ್ತಿಯ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ…

34 mins ago

ಉಜ್ವಲ ಹೋಯ್ತು, ಈಗ ಸೌದೆ ಯೋಜನೆ ಸ್ಟಾರ್ಟ್‌: ಡಿಸಿಎಂ ಡಿ.ಕೆ.ಶಿವಕುಮಾರ್‌ ವಾಗ್ದಾಳಿ

ಬೆಂಗಳೂರು: ಸೌದೆ ಮುಕ್ತ ಭಾರತ ಮಾಡ್ತೀವಿ ಎಂದು ಹೇಳಿ ಎಲ್ಲಾ ಕಡೆ ಗ್ಯಾಸ್‌ ತಂದರು. ಹಳ್ಳಿಗಳಲ್ಲೂ ಗ್ಯಾಸ್‌ ಬಂತು. ಈಗ…

1 hour ago

ಇರಾನ್‌ನ ಇಸ್ಫಹಾನ್‌ನಲ್ಲಿ ಸರಣಿ ಸ್ಫೋಟ

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ತನ್ನ ಪ್ರತೀಕಾರ ಮುಂದುವರಿಸಿದೆ. ಇರಾನ್‌ನ ಇಸ್ಪಹಾನ್‌ ನಗರದಲ್ಲಿರುವ ಮಿಲಿಟರಿ ಕೇಂದ್ರದ ಮೇಲೆ…

1 hour ago

ಓದುಗರ ಪತ್ರ: ಟೋಲ್ ದರ ಹೆಚ್ಚಳ ಗಾಯದ ಮೇಲೆ ಬರೆ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಏಪ್ರಿಲ್‌ನಿಂದ ಅನ್ವಯವಾಗುವಂತೆ ಫಾಸ್ಟ್‌ಟ್ಯಾಗ್ ವಾರ್ಷಿಕ ಪಾಸ್ ದರವನ್ನು ೩೦೦೦ ರೂ.ನಿಂದ ೩೦೭೫ ರೂ. ಗೆ ಏರಿಸಿರುವುದು…

2 hours ago