ಬೆಂಗಳೂರು: ಮುಂದಿನ ವರ್ಷದಿಂದ ಪಠ್ಯ ಪುಸ್ತಕಗಳಲ್ಲಿ ಹೃದಯಘಾತದ ಕುರಿತಾದ ವಿಚಾರ ಅಳವಡಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಯುವ ಜನತೆಯಲ್ಲಿ ಹೃದಯಾಘಾತ ಹಾಗೂ ಹಠಾತ್ ಸಾವು ಸಂಭವಿಸುತ್ತಿರುವ ಕಾರಣ ಮುಂದಿನ ಶೈಕ್ಷಣಿಕ ವರ್ಷದಿಂದ ಹೃದಯಾಘಾತ ಹಾಗೂ ಹೃದಯದ ಆರೋಗ್ಯ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸುವ ವಿಚಾರವನ್ನು ಪಠ್ಯಪುಸ್ತಕದಲ್ಲಿ ಅಳವಡಿಸಲು ಚಿಂತನೆ ನಡೆದಿದೆ.
ತಜ್ಞರ ಸಮಿತಿಯ ಶಿಫಾರಸ್ಸಿನಂತೆ ಕೈಗೊಳ್ಳಲಿರುವ ಎಲ್ಲಾ ಕ್ರಮಗಳ ಕುರಿತು ಸಿಎಂ ಸಿದ್ದರಾಮಯ್ಯ ಅವರ ಜೊತೆ ಸಮಾಲೋಚನೆ ನಡೆಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಇನ್ನು ರಾಜ್ಯದಲ್ಲಿ ಸಂಭವಿಸುವ ಹಠಾತ್ ಸಾವನ್ನು ಇನ್ನು ಮುಂದೆ ಅಧಿಸೂಚಿತ ಕಾಯಿಲೆ ಎಂದು ಪರಿಗಣಿಸಲು ಹಾಗೂ ಆಸ್ಪತ್ರೆಯಿಂದ ಹೊರಗೆ ಹೃದಯಾಘಾತದಿಂದ ಮೃತಪಟ್ಟವರ ಮರಣೋತ್ತರ ಪರೀಕ್ಷೆ ಕಡ್ಡಾಯಗೊಳಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ.





