ಬೆಂಗಳೂರು : ಪ್ರಸಕ್ತ ಸಾಲಿನ ಬೇಸಿಗೆಯಲ್ಲಿ ವಾಡಿಕೆಗಿಂತ ಹೆಚ್ಚು ತಾಪಮಾನ ಏರಿಕೆಯಾಗಿದ್ದು, ಹೆಚ್ಚಿನ ಬಿಸಿಲು ಇರುವ ಕಾರಣ, ಗ್ರಾಮೀಣ ಭಾಗದ ಜೀವನೋಪಾಯದ ಪ್ರಮುಖ ಭಾಗವಾದ ನರೇಗಾ ಯೋಜನೆಯಡಿ ಕೂಲಿ ಕೆಲಸ ಮಾಡುವ ಬೆಳಗಾವಿ ಮತ್ತು ಕಲಬುರಗಿ ಕಂದಾಯ ವಿಭಾಗದ ಕಾರ್ಮಿಕರಿಗೆ ಎಪ್ರಿಲ್ ಮತ್ತು ಮೇ ಮಾಹೆಗಳಲ್ಲಿ ಶೇ.30 ರಷ್ಟು ಕೆಲಸದ ಪ್ರಮಾಣದಲ್ಲಿ ರಿಯಾಯಿತಿ ಘೋಷಿಸಿರುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಬೇಸಿಗೆ ದಿನಗಳಲ್ಲಿ ಕೂಲಿ ಕಾರ್ಮಿಕರು ಶಾಖಾಘಾತದಿಂದ, ತಮ್ಮ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳನ್ನು ತಪ್ಪಿಸಲು ಬಿಳಿಯ ಬಣ್ಣದ ಸಡಿಲವಾದ ಖಾದಿ ಬಟ್ಟೆಗಳನ್ನು ಹಾಗೂ ತಲೆಯ ಮೇಲೆ ಬಿಳಿ ಬಣ್ಣದ ರುಮಾಲು ಧರಿಸಿ ಕೆಲಸ ಮಾಡಬೇಕು, ಚಹಾ, ಕಾಫಿ , ತಂಪಾದ ಪಾನೀಯಗಳು, ಮಸಾಲೆ ಮತ್ತು ಎಣ್ಣೆಭರಿತ ಆಹಾರದ ಬದಲಾಗಿ ಹೆಚ್ಚು ತೇವಾಂಶವುಳ್ಳ ತರಕಾರಿ, ಅಂಬಲಿ, ಮಜ್ಜಿಗೆ, ಎಳೆನೀರು ಸೇವನೆ ಮಾಡಬೇಕು ಹಾಗೂ ನೀರನ್ನು ಯಥೇಚ್ಛವಾಗಿ ಕುಡಿಯಬೇಕು ಎಂದು ಸಚಿವರು ಸಲಹೆ ಮಾಡಿದ್ದಾರೆ.
ಸಂಬಂಧಿಸಿದ ಅಧಿಕಾರಿಗಳು ಕಾಮಗಾರಿ ಸ್ಥಳಗಳಲ್ಲಿ ಯೋಜನೆಯ ಮಾರ್ಗಸೂಚಿಯಂತೆ ಕಡ್ಡಾಯವಾಗಿ ನೆರಳು, ಶುದ್ಧ ಕುಡಿಯುವ ನೀರು, ಪ್ರಥಮ ಚಿಕಿತ್ಸಾ ಪೆಟ್ಟಿಗೆ ಮುಂತಾದ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕ್ರಮವಹಿಸಲು ಸಚಿವರು ನಿರ್ದೇಶನ ನೀಡಿದ್ದಾರೆ.
ಮದ್ದೂರು : ತಾಲ್ಲೂಕಿನ ನಿಡಘಟ್ಟದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕಾರು ಸುಟ್ಟುಹೋಗಿದ್ದು, ಅದೃಷ್ಟವಶಾತ್…
ಮೈಸೂರು : ಇತ್ತೀಚಿನ ದಿನಗಳಲ್ಲಿ ಸಾಂಪ್ರದಾಯಿಕ ಅಡುಗೆ ಎಣ್ಣೆಗಳು, ಅವುಗಳ ಆರೋಗ್ಯ ಲಾಭಗಳ ಕಾರಣದಿಂದ ಮತ್ತೆ ಹೆಚ್ಚಿನ ಮಹತ್ವ ಪಡೆದುಕೊಳ್ಳುತ್ತಿವೆ.…
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು (ಜ.8) ನಡೆದ 2026ನೇ ಸಾಲಿನ 2ನೇ ಸಚಿವ ಸಂಪುಟದ ಸಭೆಯಲ್ಲಿ…
ಮಂಡ್ಯ : ನಗರಕ್ಕೆ ಹೈಟೆಕ್ ಸ್ಪರ್ಶ ನೀಡಲು ಮುಂದಾಗಿರುವ ಶಾಸಕ ಪಿ. ರವಿಕುಮಾರಗೌಡ ಅವರು, ಒಕ್ಕಲಿಗ ಜನಾಂಗದ ಹಲವು ವರ್ಷಗಳ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಸ್ವಚ್ಛತೆಯನ್ನು ಕಾಪಾಡುವ ನಿಟ್ಟಿನಲ್ಲಿ ನಗರದಲ್ಲಿ ಬೀದಿಬದಿ ವ್ಯಾಪಾರಿಗಳ ವಲಯ ನಿರ್ಮಿಸಲು ಆದ್ಯತೆ ನೀಡಲಾಗುವುದು…
ಬೆಂಗಳೂರು : ಹಣಕಾಸು ಇಲಾಖೆ ಅನುಮತಿ ನೀಡಿದ ತಕ್ಷಣವೇ 2025ರ ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣವನ್ನು…