Mysore
23
overcast clouds

Social Media

ಭಾನುವಾರ, 14 ಜೂನ್ 2026
Light
Dark

ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಬಿಸಿ ಗಾಳಿ ಎಚ್ಚರಿಕೆ

ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಬಿಸಿ ಗಾಳಿಯಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರು ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಜಿಲ್ಲಾ ಆಪತ್ತು ನಿರ್ವಹಣಾ ಪ್ರಾಧಿಕಾರ ಸಲಹೆಗಳನ್ನು ನೀಡಿದೆ.

ಆರೋಗ್ಯ ಇಲಾಖೆ ಸಲಹೆ:
೧) ಹೆಚ್ಚಾಗಿ ನೀರನ್ನು ಕುಡಿಯಬೇಕು
೨) ಸಡಿಲವಾದ ಹತ್ತಿಯ ಉಡುಪುಗಳನ್ನು ಧರಿಸಬೇಕು
೩) ಪಾದರಕ್ಷೆ ಧರಿಸದೇ ಹೊರಹೋಗುವ ಅಭ್ಯಾಸವನ್ನು ತಪ್ಪಿಸಿ
೪) ದೂರದ ಪ್ರಯಾಣವನ್ನು ರಾತ್ರಿ ವೇಳೆ ಮಾಡುವುದು ಉತ್ತಮ
೫) ಹೊರಗಡೆ ಕೆಲಸ ಮಾಡುತ್ತಿದ್ದರೆ ಟೋಪಿ ಬಳಸಲು ಸೂಚನೆ
೬) ಪ್ರಾಣಿ ಪಕ್ಷಿಗಳನ್ನು ನೆರಳಿನಲ್ಲಿ ಇರಿಸಿ, ಅವುಗಳಿಗೆ ಕುಡಿಯಲು ಸಾಕಷ್ಟು ನೀರು ಕೊಡಿ
೭) ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್‌, ಚಹಾ, ಕಾಫಿ ಮತ್ತು ಹಾನಿಕಾರಕ ಪಾನೀಯಗಳನ್ನು ಸೇವಿಸಬೇಡಿ

Tags:
error: Content is protected !!