ರಾಜ್ಯ

ಬೆಂಗಳೂರಿನಲ್ಲಿ ಡೆಂಗ್ಯೂ ಆರ್ಭಟ: ಲಾರ್ವಾ ನಾಶಕ್ಕೆ ಮನೆ ಮನೆ ತಪಾಸಣೆ

ಬೆಂಗಳೂರು: ಡೆಂಗ್ಯೂ ಪ್ರಕರಣಗಳನ್ನು ನಿಯಂತ್ರಿಸಲು ಬೆಂಗಳೂರು ನಗರದ 12.5 ಲಕ್ಷ ಮನೆಗಳಲ್ಲಿ ಲಾರ್ವಾ ಪತ್ತೆಗಾಗಿ ಪ್ರತಿ 15 ದಿನಗಳಿಗೊಮ್ಮೆ ತಪಾಸಣೆ ನಡೆಸಲು ನಿರ್ಧರಿಸಲಾಗಿದೆ. ಅದಕ್ಕಾಗಿ ಆಶಾ ಕಾರ್ಯಕರ್ತೆಯರ ಜೊತೆಗೆ ಎನ್‌ಎಸ್‌ಎಸ್‌ ಕಾರ್ಯಕರ್ತರು ಹಾಗೂ ನರ್ಸಿಂಗ್‌ ಕಾಲೇಜು ಸಿಬ್ಬಂದಿಯನ್ನು ಬಳಸಿಕೊಳ್ಳಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ತಿಳಿಸಿದ್ದಾರೆ.

ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಡೆಂಗ್ಯೂ ತಡೆಗೆ ಆರೋಗ್ಯ ಇಲಾಖೆ ಸಂಪೂರ್ಣ ಸಿದ್ಧತೆ ನಡೆಸಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ವತಿಯಿಂದ ಆರೋಗ್ಯ ತಪಾಸಣೆ ಜಾಸ್ತಿಯಾಗಿದ್ದು, ಈ ಬಗ್ಗೆ ಬಿಬಿಎಂಪಿ ಆಯುಕ್ತ ತುಷಾರ್‌ ಗಿರಿನಾಥ್‌ ಮಾಹಿತಿ ನೀಡಿದ್ದಾರೆ.

ನಗರದಲ್ಲಿನ 28 ಲಕ್ಷ ಮನೆಗಳ ಪೈಕಿ 12.5 ಲಕ್ಷ ಮನೆಗಳಲ್ಲಿ ಪ್ರತಿ 14 ದಿನಕ್ಕೊಮ್ಮೆ ಪರಿಶೀಲನೆ ನಡೆಸಲಾಗುವುದು. ಸದ್ಯ ಆಶಾ ಕಾರ್ಯಕರ್ತೆಯರ ತಂಡಗಳನ್ನು ರಚಿಸಲಾಗಿದೆ. ಆದರೆ ಎಲ್ಲಾ ಮನೆಗಳನ್ನು ಅವರಿಂದ ಪರಿಶೀಲಿಸಿ ಲಾರ್ವಾ ಪತ್ತೆ ಮಾಡಿ ನಾಶ ಮಾಡುವುದು ಕಷ್ಟವಾಗುತ್ತಿದೆ. ಹೀಗಾಗಿ ಎನ್‌ಎಸ್‌ಎಸ್‌ ಕಾರ್ಯಕರ್ತರು, ನರ್ಸಿಂಗ್‌ ಕಾಲೇಜು ಸಿಬ್ಬಂದಿಯನ್ನು ಬಳಸಿಕೊಳ್ಳಲು ನಿರ್ಧರಿಸಲಾಗಿದೆ. 1500 ತಂಡಗಳನ್ನು ರಚಿಸಿ ಪ್ರತಿದಿನ ಲಕ್ಷ ಮನೆಗಳ ಆಸುಪಾಸಿನಲ್ಲಿ ಪರಿಶೀಲಿಸುವಂತೆ ಸೂಚಿಸಲಾಗುವುದು ಎಂದರು.

ಡೆಂಗ್ಯೂ ಪ್ರಕರಣಗಳ ಪರೀಕ್ಷೆಗೆ ಸಂಬಂಧಿಸಿದ ಉಪಕರಣಗಳ ಕೊರತೆಯಿಲ್ಲ. ಬಿಬಿಎಂಪಿಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ 6000 ಪರೀಕ್ಷಾ ಸಾಮಗ್ರಿಗಳಿವೆ. ಜ್ವರದ ಲಕ್ಷಣಗಳಿರುವವರು ಆರೋಗ್ಯ ಕೇಂದ್ರಕ್ಕೆ ಬಂದರೆ ಅವರನ್ನು ಪರೀಕ್ಷೆಗೆ ಒಳಪಡಿಸಲಾಗುವುದು. ಜೊತೆಗೆ ಶೀಘ್ರದಲ್ಲೇ 30 ಸಾವಿರ ಪರೀಕ್ಷಾ ಸಾಮಗ್ರಿ ನೀಡುವುದಾಗಿ ಆರೋಗ್ಯ ಇಲಾಖೆ ತಿಳಿಸಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕೆಕೆಆರ್‌ಗೆ ಮುಖಭಂಗ ; ಮೊದಲ ಗೆಲುವು ದಾಖಲಿಸಿದ ಎಸ್‌ಆರ್‌ಎಚ್‌

ಕೋಲ್ಕತ್ತಾ : ಹೆನ್ರಿಚ್ ಕ್ಲಾಸೆನ್ ಅರ್ಧಶತಕದಾಟ ಹಾಗೂ ನಿತೀಶ್ ಕುಮಾರ್ ರೆಡ್ಡಿ ಅವರ ಆಲ್‌ರೌಂಡರ್ ಆಟದ ನೆರವಿನಿಂದ ಅತಿಥೇಯ ಕೋಲ್ಕತ್ತಾ…

9 hours ago

ಮೈಸೂರು ಫಾಲ್ಕನ್ ಟೈರ್ಸ್‌ನ ಮಾಜಿ ಮಾಲೀಕ ರುಹಿಯಾ ಬಂಧನ

315 ಕೋಟಿ ಸೈಬರ್ ವಂಚನೆ ಪ್ರಕರಣದಲ್ಲಿ ಬಂಧನ ಕೋಲ್ಕತ್ತಾ : ಶೆಲ್‌ ಕಂಪನಿಗಳು ಮತ್ತು ಕ್ರಿಪ್ಟೋಕರೆನ್ಸಿ ಆಧಾರಿತ ಹಣ ವರ್ಗಾವಣೆಯ…

10 hours ago

ಹೊರ್ಮುಜ್ ಕುರಿತು ಬ್ರಿಟನ್ ನೇತೃತ್ವದ ಸಭೆಯಲ್ಲಿ ಭಾರತ ಭಾಗವಹಿಸಲಿದೆ

ಲಂಡನ್‌ : ಇರಾನ್-ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆ ಫೆಬ್ರವರಿ 28ರಿಂದ ಮುಚ್ಚಲ್ಪಟ್ಟಿರುವ ಹೊರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವ ಬಗ್ಗೆ ಚರ್ಚಿಸಲು ಬ್ರಿಟನ್…

10 hours ago

ಸಂವಿಧಾನ ಬದಲಾವಣೆ ಅಸಾಧ್ಯ : ಮುಖ್ಯಮಂತ್ರಿ ಚಂದ್ರು

ಮೈಸೂರು : ಕೆಲವರು ಸಂವಿಧಾನ ಬದಲಿಸುವ ಮಾತನಾಡುತ್ತಾರೆ, ಖಂಡಿತ ಇದು ಅಸಾಧ್ಯ. ಸಂವಿಧಾನಕ್ಕೆ ತಿದ್ದುಪಡಿ ಮಾಡಬಹುದೇ ಹೊರತು ಮೂಲ ತತ್ವಗಳನ್ನು…

11 hours ago

KSOU | ಕುಲಪತಿ ಹುದ್ದೆಗೆ ಅರ್ಜಿ ಆಹ್ವಾನ

ಮೈಸೂರು : ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU) ಕುಲಪತಿ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ…

12 hours ago

ನಕ್ಸಲ್ ಮುಕ್ತ ಮಾಡಿದ ಮೊದಲ ರಾಜ್ಯ ಕರ್ನಾಟಕ : ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು : ಬಹಳ ವರ್ಷಗಳ ಹಿಂದೆಯೇ ನಕ್ಸಲ್ ನಿಗ್ರಹ ಪಡೆ (ಎಎನ್‌ಎಫ್‌) ಸ್ಥಾಪಿಸುವ ಮೂಲಕ ದೇಶದಲ್ಲೇ ಮೊದಲು ಕರ್ನಾಟಕವನ್ನು ನಾವು…

13 hours ago