ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣಗಳನ್ನು ನಿಯಂತ್ರಿಸಲು ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳು ಕೈಗೊಳ್ಳಬೇಕಾದ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ವಿವರವಾದ ಮಾರ್ಗಸೂಚಿ ನೀಡಿದ್ದಾರೆ.
ಉಪಯುಕ್ತ ಮತ್ತು ತ್ಯಾಜ್ಯ ವಸ್ತುಗಳಲ್ಲಿ ಮಳೆ ಸಂಗ್ರಹವಾಗದಂತೆ ನೀರು ಶೀಘ್ರ ವಿಲೇವಾರಿ ಮಾಡಬೇಕು ಎಂದು ಸೂಚಿಸಿದ್ದಾರೆ. ಅಂಗನವಾಡಿ, ಶಾಲಾ-ಕಾಲೇಜುಗಳ ಆವರಣಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಹಾಗೂ ನೀರಿನ ಶೇಖರಣೆಗಳಲ್ಲಿ ಡೆಂಗ್ಯೂಗೆ ಕಾರಣವಾದ ಈಡಿಸ್ ಸೊಳ್ಳೆಗಳು ಉತ್ಪತ್ತಿಯಾಗದಂತೆ ಕ್ರಮ ವಹಿಸಬೇಕು.
ಗ್ರಾಮಗಳಲ್ಲಿ ಮಳೆಯ ನೀರು ನಿಲ್ಲದಂತೆ ಗುಂಡಿ ಹಾಗೂ ತಗ್ಗುಗಳನ್ನು ಮುಚ್ಚಬೇಕು. ಸಾರ್ವಜನಿಕ ನಲ್ಲಿಗಳು ಹಾಗೂ ಕೊಳಬೆ ಬಾವಿಗಳಿಂದ ಅಳವಡಿಸಲಿರುವ ಹೆಚ್ಚುವರಿ ನೀರನ್ನು ಶುಚಿಗೊಳಿಸಬೇಕು. ನೀರು ಸೋರಿಕೆ ತಡೆ, ನೀರು ಸರಾಗವಾಗಿ ಹೊರಗೆ ಹೋಗಲು ಹೂಳನ್ನು ಎತ್ತಿ ಸ್ವಚ್ಛವಾಗಿಸಬೇಕು.
ಇನ್ನೂ ಎಳನೀರು ಮಾರಾಟಗಾರರು ಚಿಪ್ಪುಗಳಲ್ಲಿ ಮಳೆ ನೀರು ಶೇಖರಣೆಯಾಗುವುದನ್ನು ತಡೆಗಟ್ಟಲು ಬುರುಡೆಗಳನ್ನು ನಾಲ್ಕು ಭಾಗ ಮಾಡಿ ಬೋರಲು ಇಟ್ಟು ಪ್ರತಿದಿನ ಕಡ್ಡಾಯವಾಗಿ ವಿಲೇವಾಋಿ ಮಾಡುವಂತೆ ನೋಡಿಕೊಳ್ಳಬೇಕು ಎಂದು ಖಡಕ್ ಸೂಚನೆ ನೀಡಿದ್ದಾರೆ.
ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ…
ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ.…
ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ…
ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ…
ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ.…
ಇಸ್ಲಾಮಾಬಾದ್: ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ…