Mysore
31
scattered clouds
Light
Dark

ರಾಜ್ಯದಲ್ಲಿ ಇಂದು ಒಂದೇ ದಿನ 400ಕ್ಕೂ ಹೆಚ್ಚು ಡೆಂಗ್ಯೂ ಕೇಸ್‌ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 437 ಡೆಂಗ್ಯೂ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 8658ಕ್ಕೆ ಏರಿಕೆಯಾಗಿದೆ.

ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯಲ್ಲಿ 165 ಹೊಸ ಕೇಸ್‌ಗಳು ದಾಖಲಾಗಿದ್ದು, ಸದ್ಯ 91 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಕಳೆದ 24 ಗಂಟೆಗಳಲ್ಲಿ 2704 ಡೆಂಗ್ಯೂ ಟೆಸ್ಟ್‌ ನಡೆಸಲಾಗಿದ್ದು, ಈ ಪೈಕಿ 437 ಜನರಿಗೆ ಪ್ರಕರಣ ದೃಢವಾಗಿದೆ.

ಬೆಂಗಳೂರಿನಲ್ಲೇ ಅತೀ ಹೆಚ್ಚು ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದ್ದು, ಬೆಂಗಳೂರು ರಾಜ್ಯದ ಹಾಟ್‌ಸ್ಪಾಟ್‌ ಆಗಿದೆ. ಇದರ ಜೊತೆ ಜೊತೆಗೆ ಜಿಲ್ಲೆಗಳಲ್ಲೂ ಕೂಡ ಡೆಂಗ್ಯೂ ಆರ್ಭಟ ಶುರುಮಾಡಿದ್ದು, ಮಂಡ್ಯ ಹಾಗೂ ಮೈಸೂರಿನಲ್ಲಿ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಲೇ ಇದೆ.

ಇಂದು ಮೈಸೂರಿನಲ್ಲಿ 17 ಕೇಸ್‌ ಪತ್ತೆಯಾಗಿದ್ದು, ಮಂಡ್ಯದಲ್ಲಿ 47 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ. ಇದರ ಜೊತೆಗೆ ಕೊಡಗಿನಲ್ಲಿ 9, ಹಾಸನದಲ್ಲಿ 6 ಪ್ರಕರಣಗಳು ಪತ್ತೆಯಾಗಿವೆ.