ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 437 ಡೆಂಗ್ಯೂ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 8658ಕ್ಕೆ ಏರಿಕೆಯಾಗಿದೆ.
ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯಲ್ಲಿ 165 ಹೊಸ ಕೇಸ್‌ಗಳು ದಾಖಲಾಗಿದ್ದು, ಸದ್ಯ 91 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಕಳೆದ 24 ಗಂಟೆಗಳಲ್ಲಿ 2704 ಡೆಂಗ್ಯೂ ಟೆಸ್ಟ್ ನಡೆಸಲಾಗಿದ್ದು, ಈ ಪೈಕಿ 437 ಜನರಿಗೆ ಪ್ರಕರಣ ದೃಢವಾಗಿದೆ.
ಬೆಂಗಳೂರಿನಲ್ಲೇ ಅತೀ ಹೆಚ್ಚು ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದ್ದು, ಬೆಂಗಳೂರು ರಾಜ್ಯದ ಹಾಟ್‌ಸ್ಪಾಟ್ ಆಗಿದೆ. ಇದರ ಜೊತೆ ಜೊತೆಗೆ ಜಿಲ್ಲೆಗಳಲ್ಲೂ ಕೂಡ ಡೆಂಗ್ಯೂ ಆರ್ಭಟ ಶುರುಮಾಡಿದ್ದು, ಮಂಡ್ಯ ಹಾಗೂ ಮೈಸೂರಿನಲ್ಲಿ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಲೇ ಇದೆ.
ಇಂದು ಮೈಸೂರಿನಲ್ಲಿ 17 ಕೇಸ್ ಪತ್ತೆಯಾಗಿದ್ದು, ಮಂಡ್ಯದಲ್ಲಿ 47 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ. ಇದರ ಜೊತೆಗೆ ಕೊಡಗಿನಲ್ಲಿ 9, ಹಾಸನದಲ್ಲಿ 6 ಪ್ರಕರಣಗಳು ಪತ್ತೆಯಾಗಿವೆ.
ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…
ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…
ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…
ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…
ಮುಂಬೈ : ಆದಿತ್ಯ ಧರ್ ನಿರ್ದೇಶನದ, ರಣವೀರ್ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.19) ಬಿಡುಗಡೆಯಾಗಲಿದೆ. ಕಳೆದ ವರ್ಷ…