Mysore
26
overcast clouds

Social Media

ಗುರುವಾರ, 09 ಏಪ್ರಿಲ 2026
Light
Dark

ರಾಜ್ಯದಲ್ಲಿ ಮುಂದುವರಿದ ಹಿಂಗಾರು ಮಳೆಯ ಅಬ್ಬರ

Rain Intensifies; Red Alert Issued

ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಹಿಂಗಾರು ಮಳೆ ಅಬ್ಬರಿಸಿ ಬೊಬ್ಬಿರಿಯುತ್ತಿದ್ದು, ಮುಂದಿನ ಒಂದು ವಾರಗಳ ಕಾಲ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಐದು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದ್ದು, 24 ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನು ಓದಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಧಾರಾಕಾರ ಮಳೆ

ಕರಾವಳಿ, ಮಲೆನಾಡಿನಲ್ಲಿ ಹೆಚ್ಚಿನ ಮಳೆ ಆಗಲಿದೆ ಎಂದು ಹೇಳಲಾಗಿದ್ದು, ಜನತೆ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.

ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಮಂಡ್ಯ, ರಾಮನಗರ, ಮೈಸೂರು, ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆಯಿದ್ದು, ದಕ್ಷಿಣ ಒಳನಾಡು, ಕರಾವಳಿ ಭಾಗದಲ್ಲಿ ಮಳೆಯಾಗುವ ಸಂಭವವಿದೆ ಎಂದು ಹೇಳಲಾಗಿದೆ.

Tags:
error: Content is protected !!