Rain Intensifies; Red Alert Issued
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರೆದಿದೆ. ಮಳೆಯ ಅಬ್ಬರಕ್ಕೆ ಹಳ್ಳಕೊಳ್ಳಗಳು ಭರ್ತಿಯಾಗಿ ಹೊಲಗದ್ದೆಗಳು ಜಲಾವೃತಗೊಂಡು ರಸ್ತೆ ಸಂಪರ್ಕ ಕಡಿತಗೊಂಡಿದೆ.
ಮಲೆನಾಡು ಭಾಗದಲ್ಲಿ ಗುಡ್ಡ ಕುಸಿತ ಉಂಟಾಗಿ ಸಂಚಾರಕ್ಕೆ ಅಡಚಣೆಯಾಗಿದೆ. ನಾಳೆಯೂ ಕೂಡ ಹಲವು ಜಿಲ್ಲೆಗಳಲ್ಲಿ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ ಮಾಡುವ ಸಾಧ್ಯತೆಯಿದೆ.
ಕೊಡಗಿನಲ್ಲಿ ಬಿಟ್ಟೂ ಬಿಡದೆ ಮಳೆ ಸುರಿಯುತ್ತಿದ್ದು, ನಿರಂತರ ಮಳೆಗೆ ಹಲವು ಅವಾಂತರಗಳು ಸೃಷ್ಟಿಯಾಗಿವೆ. ಬೃಹತ್ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿರುವುದರಿಂದ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ರಸ್ತೆ ಸಂಪರ್ಕ ಸಮರ್ಪಕವಾಗಿಲ್ಲದೆ ಜನರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಹಾಸನದಲ್ಲಿ ವರುಣನ ಅಬ್ಬರ ಮುಂದುವರೆದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಕಳೆದ ಮೂರು ದಿನಗಳಿಂದ ನಿರಂತರ ಮಳೆ ಸುರಿಯುತ್ತಿದ್ದು, ಭಾರೀ ಮಳೆಗೆ ರಸ್ತೆಗಳೆಲ್ಲಾ ಸಂಪೂರ್ಣ ಜಲಾವೃತಗೊಂಡಿವೆ.
ಸಕ್ಕರೆ ನಾಡು ಮಂಡ್ಯದಲ್ಲೂ ಮಳೆಯ ಅಬ್ಬರ ಮುಂದುವರೆದಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳುತ್ತಿದ್ದು, ಮೈಸೂರು ಭಾಗದಲ್ಲಿ ಮಳೆಯಾಗುತ್ತಿದ್ದು, ಕಾವೇರಿ ನದಿಗೆ ಒಳಹರಿವು ಹೆಚ್ಚಾಗಿದೆ.
ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆಯಲ್ಲೂ ಕೂಡ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ನಾಳೆಯೂ ಮಳೆಯ ಪರಿಸ್ಥಿತಿ ನೋಡಿಕೊಂಡು ಆಯಾಯ ಜಿಲ್ಲೆಯ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡುವ ಸಾಧ್ಯತೆಯಿದೆ.
ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…
ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…
ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…
ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…