ರಾಜ್ಯ

ರಾಜ್ಯದಲ್ಲಿ ಮುಂದುವರಿದ ಮಳೆಯ ಆರ್ಭಟ: ಇನ್ನೂ ನಾಲ್ಕು ದಿನ ಭಾರೀ ಮಳೆಯಾಗುವ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರೆದಿದೆ. ಮಳೆಯ ಅಬ್ಬರಕ್ಕೆ ಹಳ್ಳಕೊಳ್ಳಗಳು ಭರ್ತಿಯಾಗಿ ಹೊಲಗದ್ದೆಗಳು ಜಲಾವೃತಗೊಂಡು ರಸ್ತೆ ಸಂಪರ್ಕ ಕಡಿತಗೊಂಡಿದೆ.

ಮಲೆನಾಡು ಭಾಗದಲ್ಲಿ ಗುಡ್ಡ ಕುಸಿತ ಉಂಟಾಗಿ ಸಂಚಾರಕ್ಕೆ ಅಡಚಣೆಯಾಗಿದೆ. ನಾಳೆಯೂ ಕೂಡ ಹಲವು ಜಿಲ್ಲೆಗಳಲ್ಲಿ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ ಮಾಡುವ ಸಾಧ್ಯತೆಯಿದೆ.

ಕೊಡಗಿನಲ್ಲಿ ಬಿಟ್ಟೂ ಬಿಡದೆ ಮಳೆ ಸುರಿಯುತ್ತಿದ್ದು, ನಿರಂತರ ಮಳೆಗೆ ಹಲವು ಅವಾಂತರಗಳು ಸೃಷ್ಟಿಯಾಗಿವೆ. ಬೃಹತ್‌ ಮರಗಳು, ವಿದ್ಯುತ್‌ ಕಂಬಗಳು ಧರೆಗುರುಳಿರುವುದರಿಂದ ವಿದ್ಯುತ್‌ ಸಂಪರ್ಕ ಕಡಿತಗೊಂಡಿದೆ. ರಸ್ತೆ ಸಂಪರ್ಕ ಸಮರ್ಪಕವಾಗಿಲ್ಲದೆ ಜನರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ಹಾಸನದಲ್ಲಿ ವರುಣನ ಅಬ್ಬರ ಮುಂದುವರೆದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಕಳೆದ ಮೂರು ದಿನಗಳಿಂದ ನಿರಂತರ ಮಳೆ ಸುರಿಯುತ್ತಿದ್ದು, ಭಾರೀ ಮಳೆಗೆ ರಸ್ತೆಗಳೆಲ್ಲಾ ಸಂಪೂರ್ಣ ಜಲಾವೃತಗೊಂಡಿವೆ.

ಸಕ್ಕರೆ ನಾಡು ಮಂಡ್ಯದಲ್ಲೂ ಮಳೆಯ ಅಬ್ಬರ ಮುಂದುವರೆದಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳುತ್ತಿದ್ದು, ಮೈಸೂರು ಭಾಗದಲ್ಲಿ ಮಳೆಯಾಗುತ್ತಿದ್ದು, ಕಾವೇರಿ ನದಿಗೆ ಒಳಹರಿವು ಹೆಚ್ಚಾಗಿದೆ.

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆಯಲ್ಲೂ ಕೂಡ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ನಾಳೆಯೂ ಮಳೆಯ ಪರಿಸ್ಥಿತಿ ನೋಡಿಕೊಂಡು ಆಯಾಯ ಜಿಲ್ಲೆಯ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡುವ ಸಾಧ್ಯತೆಯಿದೆ.

ಆಂದೋಲನ ಡೆಸ್ಕ್

Recent Posts

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…

37 mins ago

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

1 hour ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

1 hour ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

5 hours ago

ಓದುಗರ ಪತ್ರ: ದೀಪಾಲಂಕಾರ ಸಮಿತಿ ಕೆಲಸಕ್ಕೆ ಒಂದು ಸಲಾಂ

ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…

5 hours ago

ಓದುಗರ ಪತ್ರ: ‘ಈ ಮಾತು’ ಶೋಭೆ ತರುವುದೇ?

‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…

5 hours ago