ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಮತ್ತೆ ಶುರುವಾಗಿದ್ದು, ಇನ್ನೂ ಎರಡು ದಿನಗಳ ಕಾಲ ವರುಣ ಅಬ್ಬರಿಸಿ ಬೊಬ್ಬರಿಯಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗಿನಲ್ಲಿ ಎರಡು ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಇನ್ನು ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಗದಗ, ರಾಯಚೂರು ಹಾಗೂ ಯಾದಗಿರಿಯಲ್ಲೂ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇನ್ನು ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆಯೊಂದಿಗೆ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವುದರಿಂದ ಚಳಿಯ ವಾತಾವರಣದ ಅನುಭವವಾಗಲಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ ವಾರದ ಈಚೆಗೆ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.





