ರಾಜ್ಯ

ರಾಜ್ಯದಲ್ಲಿ ಮುಂದುವರಿದ ಮಳೆಯ ಅಬ್ಬರ: 3 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಮತ್ತೆ ಶುರುವಾಗಿದ್ದು, ಇನ್ನೂ ಎರಡು ದಿನಗಳ ಕಾಲ ವರುಣ ಅಬ್ಬರಿಸಿ ಬೊಬ್ಬರಿಯಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗಿನಲ್ಲಿ ಎರಡು ದಿನಗಳ ಕಾಲ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಇನ್ನು ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಗದಗ, ರಾಯಚೂರು ಹಾಗೂ ಯಾದಗಿರಿಯಲ್ಲೂ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಇನ್ನು ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆಯೊಂದಿಗೆ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವುದರಿಂದ ಚಳಿಯ ವಾತಾವರಣದ ಅನುಭವವಾಗಲಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ ವಾರದ ಈಚೆಗೆ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

ಆಂದೋಲನ ಡೆಸ್ಕ್

Recent Posts

ಮಂಡ್ಯ | ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆ

ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…

5 hours ago

ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ದಾಳಿ : ಇರಾನಿನ ಕ್ಷಿಪಣಿ ತಾಣ ನಾಶ

ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…

6 hours ago

ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ

ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…

8 hours ago

ಮೈಸೂರು ನಗರದಲ್ಲಿ ಮಳೆ ; ತಂಪಾದ ಇಳೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…

8 hours ago

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…

10 hours ago

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

10 hours ago