ಬೆಂಗಳೂರು: ರಾಜ್ಯದಲ್ಲಿ ಇನ್ನೂ ಐದು ದಿನಗಳ ಕಾಲ ಗುಡುಗು-ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದಿನಿಂದ ಅಕ್ಟೋಬರ್.10ರವರೆಗೆ ಉತ್ತಮ ಮಳೆಯಾಗಲಿದ್ದು, ಈ ಅವಧಿಯಲ್ಲಿ ಕೆಲವೆಡೆ ಮಳೆಗಿಂತ ಬಿರುಗಾಳಿ ಹೆಚ್ಚಾಗಿರುತ್ತದೆ ಎಂದು ಮುನ್ಸೂಚನೆ ನೀಡಲಾಗಿದೆ.
ಮುಂಗಾರು ಮಾರುತಗಳು ಮಧ್ಯಪ್ರದೇಶದಲ್ಲಿ ಸಕ್ರಿಯವಾಗಿರುವ ಹಿನ್ನೆಲೆಯಲ್ಲಿ ಅಲ್ಲಿ ಉತ್ತಮ ಮಳೆಯಾಗುತ್ತಿದೆ. ಶುರುವಾದ ಸ್ಥಳದಲ್ಲಿಯೇ ವಾಪಸ್ ಮಾರುಗಳು ಆಗಮಿಸಿದರೆ ಅದನ್ನು ಮುಂಗಾರು ಮುಕ್ತಾಯವೆಂದು ಘೋಷಣೆ ಮಾಡಲಾಗುತ್ತದೆ.
ಇದನ್ನೂ ಓದಿ:-ಮೈಸೂರು: ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡದೆ ಹೊರಟ ಸಿಎಂ ಸಿದ್ದರಾಮಯ್ಯ
ಇನ್ನು ಗುಜರಾತ್, ಒಡಿಶಾ ಸಮುದ್ರ ತೀರದಲ್ಲಿ ಪ್ರಸ್ತುತ ವಾಯುಭಾರ ಕುಸಿತ ಉಂಟಾಗಿದ್ದು, ರಾಜ್ಯದಲ್ಲಿ ಮುಂದಿನ ಒಂದು ವಾರಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.





