ರಾಜ್ಯ

ರಾಜ್ಯದಲ್ಲಿ ಮುಂದಿನ 5 ದಿನ ಭಾರಿ ಮಳೆ ಮುನ್ಸೂಚನೆ

ಮೈಸೂರು: ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳು ಸೇರಿದಂತೆ ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ, ಮಲೆನಾಡು ಹಾಗೂ ಕೊಡಗಿನಲ್ಲಿ ಇಂದು ಮತ್ತು ನಾಳೆ ಗುಡುಗು ಮಿಂಚು ಸಹಿತ ಜೋರಾದ ಗಾಳಿಯೊಂದಿಗೆ ವ್ಯಾಪಕವಾಗಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಹೀಗಾಗಿ, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಇನ್ನುಳಿದ ದಿನಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.

ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿಯೂ ಸಹ ಇಂದು ಗುಡುಗು ಮಿಂಚು ಸಹಿತ ಜೋರಾದ ಗಾಳಿಯೊಂದಿಗೆ ಅಲ್ಲಲ್ಲಿ ಭಾರಿ ಮಳೆಯಾಗುತ್ತದೆ. ಇನ್ನುಳಿದ ದಿನಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಉತ್ತರ ಒಳನಾಡು ಜಿಲ್ಲೆಗಳಿಗೂ ಸಹ ಇಂದು ಮತ್ತು ನಾಳೆ ಗುಡುಗು ಮಿಂಚು ಸಹಿತ ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

2 hours ago

ಇಂದು ರಾತ್ರಿ ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ 8.30ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಕುರಿತ…

2 hours ago

ಹಾಸನ: ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ

ಹಾಸನ: ಬೇಲೂರು ತಾಲ್ಲೂಕಿನ ಕಾನಳ್ಳಿ ಅರಣ್ಯ ಪ್ರದೇಶದಲ್ಲಿದ್ದ ದೈತ್ಯಾಕಾರದ ನರಹಂತಕ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಮೂರನೇ…

2 hours ago

ಏಪ್ರಿಲ್.‌20ರಿಂದ ಸಿಎಂ ಸಿದ್ದರಾಮಯ್ಯ ಮೈಸೂರು, ಚಾಮರಾಜನಗರ ಜಿಲ್ಲಾ ಪ್ರವಾಸ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಏಪ್ರಿಲ್.‌20 ಹಾಗೂ 21ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಏಪ್ರಿಲ್.‌20ರಂದು ಬೆಳಿಗ್ಗೆ ವಿಶೇಷ ವಿಮಾನದಲ್ಲಿ ಮೈಸೂರಿಗೆ…

2 hours ago

ತಿದ್ದುಪಡಿ ಮಸೂದೆಗೆ ಸೋಲು: ಕರಾಳ ಇತಿಹಾಸ ಮರುಕಳಿಸಲಿದೆ ಎಂದ ಎಚ್.ಡಿ.ಕುಮಾರಸ್ವಾಮಿ ಕಿಡಿ

ನವದೆಹಲಿ: ತಿದ್ದುಪಡಿ ಮಸೂದೆ ಸೋಲುವ ಮೂಲಕ ಲೋಕಸಭೆಯಲ್ಲಿ ಮೂವತ್ತು ವರ್ಷಗಳ ಹಿಂದಿನ ಕರಾಳ ಇತಿಹಾಸ ಮತ್ತೆ ಮರುಕಳಿಸಿದೆ ಎಂದು ಕೇಂದ್ರ…

3 hours ago

ಮೈಸೂರು| ತೃತೀಯ ಲಿಂಗಿಗೆ ಲೈಂಗಿಕ ಕಿರುಕುಳ, ಅಪಹರಣ ಯತ್ನ ಪ್ರಕರಣ: ಮೂವರ ಬಂಧನ

ಮೈಸೂರು: ನಗರದ ಮೇಟಗಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ತೃತೀಯ ಲಿಂಗಿಯೊಬ್ಬರಿಗೆ ಅಪಹರಣ ಯತ್ನ ಹಾಗೂ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ…

4 hours ago