ಉಡುಪಿ: ರಾಜ್ಯದಲ್ಲಿ ಮಳೆಯ ಆರ್ಭಟ ಜೋರಾಗಿದೆ. ಕಳೆದೊಂದು ವಾರದಿಂದ ಹಲವೆಡೆ ನಿರಂತರವಾಗಿ ಜೋರು ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮುಂಜಾಗೃತ ಕ್ರಮವಾಗಿ ಕೆಲವು ಭಾಗಗಳ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಕರಾವಳಿ ಭಾಗದ ಭಾರೀ ಮಳೆ ಹಿನ್ನೆಲೆ ಬೈಂದೂರು ವಲಯದ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಭೌಗೋಳಿಕವಾಗಿ ತಗ್ಗು ಪ್ರದೇಶದಲ್ಲಿ ನೀರು ನುಗ್ಗುವ ಅಪಾಯ ಇರುವುದರಿಂದ ರಜೆ ನೀಡಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ತಿಳಿಸಿದ್ದಾರೆ.
ಇತ್ತ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಎಲ್ಲಾ ಶಾಲೆಗಳಿಗೂ ರಜೆ ಘೋಷಿಸಲಾಗಿದೆ. ಜೊತೆಗೆ ಉತ್ತರ ಕನ್ನಡ ಜಿಲ್ಲೆಯ ಕುಮುಟಾ ತಾಲೂಕಿನ ಶಾಲೆಗಳಿಗೂ ರಜೆ ಘೋಷಿಸಲಾಗಿದೆ. ಮಳೆಯಿಂದ ಅವಾಂತರವಾಗುವ ಸಾಧ್ಯತೆಯಿದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ರಜೆ ಘೋಷಿಸಲಾಗಿದೆ.
ತುಮಕೂರು : ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ತೋ ಮಾಡಿಕೊಂಡು ಠಾಣೆಗೆ ತಂದಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು…
ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…
ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…
ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…
ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…
ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…