ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು.
ಲಾಲ್ ಬಾಗ್, ಶಾಂತಿನಗರ, ಜಯನಗರ, ವಿಜಯನಗರ, ಜೆ.ಪಿ.ನಗರ, ಮೆಜೆಸ್ಟಿಕ್, ಕೆ.ಆರ್.ಮಾರುಕಟ್ಟೆ, ಸದಾಶಿವನಗರ, ಹೆಬ್ಬಾಳ, ಬಸವನಗುಡಿ, ಬನಶಂಕರಿ, ಚಂದ್ರಾ ಲೇಔಟ್, ಕೋರಮಂಗಲ, ಕೋಣನಕುಂಟೆ ಸೇರಿದಂತೆ ಹಲವು ಕಡೆಗಳಲ್ಲಿ ಭಾರೀ ಮಳೆಯಾಗಿದೆ.
ಕೆ.ಆರ್.ಮಾರುಕಟ್ಟೆಯಲ್ಲಿ ಮಳೆಯಿಂದ ಅವ್ಯವಸ್ಥೆ ಉಂಟಾಗಿದೆ. ರಸ್ತೆಗಳಲ್ಲಿ ನೀರು ತುಂಬಿ ಹರಿಯುತ್ತಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಮಾರುಕಟ್ಟೆಗೆ ಬಂದಿದ್ದವರಂತೂ ತೀವ್ರ ತೊಂದರೆ ಅನುಭವಿಸಿದ್ದಾರೆ. ಹಲವೆಡೆ ರಸ್ತೆಗಳು, ಅಂಡರ್‌ಪಾಸ್‌ಗಳಲ್ಲಿ ಭಾರೀ ಪ್ರಮಾಣದಲ್ಲಿ ನೀರು ನಿಂತು ವಾಹನ ಸವಾರರಿಗೆ ತೊಂದರೆಯಾಗಿದೆ.





