ರಾಜ್ಯ

ಸಿಲಿಕಾನ್‌ ಸಿಟಿಯಲ್ಲಿ ವರುಣಾರ್ಭಟ: 24 ಗಂಟೆಗಳಲ್ಲಿ ದಾಖಲೆಯ ಮಳೆ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ವರುಣಾರ್ಭಟ ಮುಂದುವರಿದಿದ್ದು, ಕೇವಲ 24 ಗಂಟೆಗಳಲ್ಲಿ 103 ಮಿ.ಮೀ ಮಳೆಯಾಗಿದೆ.

ಮಳೆಯ ರೌದ್ರಾವತಾರ ಇನ್ನೂ ಒಂದು ವಾರಗಳ ಕಾಲ ಮುಂದುವರಿಯುವ ಸಾಧ್ಯತೆಯಿದ್ದು, ಜನತೆ ಎಚ್ಚರದಿಂದ ಇರುವಂತೆ ಸೂಚನೆ ನೀಡಲಾಗಿದೆ.

ಇಂದು ಸುರಿದ ಧಾರಾಕಾರ ಮಳೆಯಿಂದಾಗಿ ಬೆಂಗಳೂರು ನಗರದ ಹಲವು ಭಾಗಗಳು ಜಲಾವೃತವಾಗಿದ್ದು, ರಸ್ತೆಗಳಲ್ಲಿ ನೀರು ನಿಂತು ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ಭಾರೀ ಮಳೆಯಿಂದ ಜನವಸತಿ ಪ್ರದೇಶಗಳು ಜಲಾವೃತಗೊಂಡಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ. ಧಾರಾಕಾರ ಮಳೆಯಿಂದಾಗಿ ಒಳಚರಂಡಿಗಳು ಭರ್ತಿಯಾಗಿ ನೀರು ರಸ್ತೆ ಮೇಲೆ ಹರಿದಿದ್ದರಿಂದ ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು.

ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಸವಾರರು, ಮುಚ್ಚಿಹೋಗಿರುವ ಚರಂಡಿಗಳೇ ಇದಕ್ಕೆ ಕಾರಣ ಎಂದು ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಅಧಿಕಾರಿಗಳಿಗೆ ಪದೇ ಪದೇ ದೂರು ನೀಡಿದರೂ ಅವುಗಳನ್ನು ಸ್ವಚ್ಛಗೊಳಿಸಿಲ್ಲ ಎಂದು ಆರೋಪಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹೊರ್ಮುಜ್‌ ಬಿಕ್ಕಟ್ಟು | ಇರಾನ್‌ನ ಬಂದರುಗಳಿಗೆ ಅಮೆರಿಕದ ದಿಗ್ಬಂಧನ ಪ್ರಾರಂಭ

ಟೆಹ್ರಾನ್‌ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…

44 mins ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…

1 hour ago

ಅನಗತ್ಯ ಹೇಳಿಕೆ ನೀಡಿದರೆ ಶಿಸ್ತುಕ್ರಮ ; ಕೈ ಶಾಸಕರಿಗೆ ಡಿ.ಕೆ.ಶಿ ಎಚ್ಚರಿಕೆ

ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…

2 hours ago

ಹೆದ್ದಾರಿ ತಡೆದು ಪ್ರತಿಭಟನೆ : ಬಂಡೀಪುರ ರಾತ್ರಿ ಸಂಚಾರ ತೆರವು ಮಾಡದಂತೆ ಆಗ್ರಹ

ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…

2 hours ago

ಕೊಡಗು | ತೆರೆದ ಬಾವಿಗೆ ಬಿದ್ದ ಕಾಡಾನೆ ಮರಿ , ರಕ್ಷಣೆ

ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…

2 hours ago

ಹೊರ್ಮುಜ್‌ ಬಿಕ್ಕಟ್ಟು | ಅಮೆರಿಕ ದಿಗ್ಬಂಧನ ಬೆನ್ನಲ್ಲೇ ಇರಾನ್‌ ವಾರ್ನಿಂಗ್‌

ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…

3 hours ago