Categories: ರಾಜ್ಯ

ಭಾರೀ ಮಳೆಯಿಂದ ಮಲೆನಾಡಿನ ಫಾಲ್ಸ್‌ಗಳಿಗೆ ಜೀವಕಳೆ: ಪ್ರವಾಸಿಗರ ಸಂಖ್ಯೆ ಹೆಚ್ಚಳ

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಫಾಲ್ಸ್‌ಗಳಿಗೆ ಮತ್ತೆ ಜೀವಕಳೆ ಬಂದಂತಾಗಿದೆ.

ಕಾಫಿನಾಡು ಚಿಕ್ಕಮಗಳೂರಿಗೆ ಮುಂಗಾರು ಎಂಟ್ರಿಯಾದ್ರೆ ಸಾಕು, ಮಲೆನಾಡು ಹಚ್ಚ ಹಸಿರಿನಿಂದ ಕೂಡಿರುತ್ತದೆ. ಈ ಮೂಲಕ ಅದು ಶಾಶ್ವತ ಮುತ್ತೈದೆಯಾಗಿ ಕಂಗೊಳಿಸುತ್ತೆ. ಪಶ್ಚಿಮ ಘಟ್ಟಗಳ ಸಾಲಿನ ಜಿಟಿ ಜಿಟಿ ಮಳೆ ಕಾಫಿನಾಡಿನಲ್ಲಿ ಹೊಸದೊಂದು ಲೋಕವನ್ನೇ ಸೃಷ್ಟಿಸಿರುತ್ತದೆ.

ಈ ಎಲ್ಲಾ ಸೌಂದರ್ಯದ ಮಧ್ಯೆ ಕಾಡಿನ ನಡುವೆ ಹಲವಾರು ಚಿಕ್ಕ ಚಿಕ್ಕ ಜಲಪಾತಗಳು ಸೃಷ್ಟಿಯಾಗಿವೆ. ಆ ಸರಿಸಾಟಿ ಇಲ್ಲದ ಜಲಪಾತಗಳ ಸೌಂದರ್ಯದ ಸಾಲಿನಲ್ಲಿ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ತಪ್ಪಲಿನ ಅಬ್ಬುಗುಡಿಗೆ ಜಲಪಾತ ಕೂಡ ಸೇರಿಕೊಂಡಿದೆ.

ರಾಜ್ಯ ಸರ್ಕಾರ ಈ ಜಲಪಾತಕ್ಕೆ ಮೂಲಭೂತ ಸೌಕರ್ಯ ನೀಡಿದ್ರೆ ಕಾಡಂಚಿನ ಜಲಪಾತ ಪ್ರವಾಸಿಗರ ಹಾಟ್‌ಸ್ಪಾಟ್‌ ಆಗೋದು ಗ್ಯಾರಂಟಿ ಎನ್ನಲಾಗಿದೆ.

ಕಾಡಿನ ಮಧ್ಯದಲ್ಲಿರುವ ಈ ಜಲಪಾತಕ್ಕೆ ಸೂಕ್ತ ರಸ್ತೆ ವ್ಯವಸ್ಥೆ ಇಲ್ಲ. ಕಾಡಿನ ಮಧ್ಯೆ ಅಲ್ಲಲ್ಲಿ ನಾಮಫಲಕಗಳಿವೆ. ಆದರೆ ರಸ್ತೆ ಮಾತ್ರ ಸಮರ್ಪಕವಾಗಿಲ್ಲ ಎಂದು ಪ್ರವಾಸಿಗರು ಬೇಸರ ವ್ಯಕ್ತಪಡಿಸಿದ್ದಾರೆ.

ಈ ಜಲಪಾತ ಮಳೆಯಿಂದ ತುಂಬಿ ತುಳುಕುತ್ತಿದ್ದು, ಮೈದುಂಬಿ ಹರಿಯುತ್ತಿದೆ. ಈ ಮೂಲಕ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ. ಈ ಹಿನ್ನೆಲೆಯಲ್ಲಿ ಜಲಪಾತಕ್ಕೆ ಭೇಟಿ ನೀಡುವ ಪ್ರವಾಸಿಗರು ಸಖತ್‌ ಎಂಜಾಯ್‌ ಮಾಡುತ್ತಿದ್ದಾರೆ.

ಇದರ ಜೊತೆ ಜೊತೆಗೆ ಚಿಕ್ಕಮಗಳೂರಿನ ಅನೇಕ ಫಾಲ್ಸ್‌ಗಳಿಗೆ ಈಗ ಜೀವಕಳೆ ಬಂದಂತಾಗಿದ್ದು, ಪ್ರವಾಸಿಗರ ಸಂಖ್ಯೆ ಬಹಳ ಹೆಚ್ಚಾಗಿದೆ. ಈ ಮೂಲಕ ಚಿಕ್ಕಮಗಳೂರಿಗೆ ಭೇಟಿ ನೀಡುತ್ತಿರುವ ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನನಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ: ಸಚಿವ ದಿನೇಶ್‌ ಗುಂಡೂರಾವ್‌

ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.…

44 mins ago

ಮಾಸ್ಕ್‌ ಮ್ಯಾನ್‌ ಚಿನ್ನಯ್ಯನಿಗೆ ಜಾಮೀನು ಸಿಕ್ಕರೂ ಬಿಡುಗಡೆ ಭಾಗ್ಯವಿಲ್ಲ

ಮಂಗಳೂರು: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನಾಗಿ ಬಂದ ಬಳಿಕ ಆರೋಪಿಯಾಗಿ ಜೈಲಿನಲ್ಲಿರುವ ಮಾಸ್ಕ್‌ ಮ್ಯಾನ್‌ ಚಿನ್ನಯ್ಯನಿಗೆ ಜಾಮೀನು ಸಿಕ್ಕಿ…

55 mins ago

ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ, ಶ್ರೀ ನಂಜುಂಡಸ್ವಾಮಿಗಳ 16ನೇ ಸಂಸ್ಮರಣೋತ್ಸವ

ಟಿ.ನರಸೀಪುರ: ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ ಹಾಗೂ ಶ್ರೀ ನಂಜುಂಡಸ್ವಾಮಗಳ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಹೊಸಮಠದ…

1 hour ago

ರೆಪೋ ದರ ಕಡಿತಗೊಳಿಸಿದ ಭಾರತೀಯ ರಿಸರ್ವ್ ಬ್ಯಾಂಕ್

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೊ ದರವನ್ನು ಶೇ. 5.5% ರಿಂದ 5.25ಕ್ಕೆ ಅಂದರೆ 25 ಬೇಸಿಸ್ ಪಾಯಿಂಟ್‍ಗಳಷ್ಟು…

1 hour ago

ಮಂಡ್ಯ ಕೃಷಿ ಪ್ರದಾನ ಜಿಲ್ಲೆ: ಸಿಎಂ ಸಿದ್ದರಾಮಯ್ಯ

ಮಂಡ್ಯ: ಲ್ಯಾಬ್‌ ಟು ಲ್ಯಾಂಡ್‌ ಆದರೆ ಮಾತ್ರ ರೈತರಿಗೆ ಸಂಪೂರ್ಣ ಅನುಕೂಲವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಕುರಿತು…

1 hour ago

ಹೊಸ ದಾಖಲೆ ನಿರ್ಮಿಸಿದ ಬೆಂಗಳೂರು ಪೊಲೀಸರು: ಏನದು ಗೊತ್ತಾ?

ಬೆಂಗಳೂರು: ಮಾದಕದ್ರವ್ಯ ಮಾರಾಟ ಮತ್ತು ಮಾದಕದ್ರವ್ಯ ಸೇವನೆಯನ್ನು ನಿಗ್ರಹಿಸುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸರು ಹೊಸ ದಾಖಲೆ ನಿರ್ಮಿಸಿದ್ದಾರೆ. ಪ್ರಸಕ್ತ ಸಾಲಿನ…

2 hours ago