ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಫಾಲ್ಸ್‌ಗಳಿಗೆ ಮತ್ತೆ ಜೀವಕಳೆ ಬಂದಂತಾಗಿದೆ.
ಕಾಫಿನಾಡು ಚಿಕ್ಕಮಗಳೂರಿಗೆ ಮುಂಗಾರು ಎಂಟ್ರಿಯಾದ್ರೆ ಸಾಕು, ಮಲೆನಾಡು ಹಚ್ಚ ಹಸಿರಿನಿಂದ ಕೂಡಿರುತ್ತದೆ. ಈ ಮೂಲಕ ಅದು ಶಾಶ್ವತ ಮುತ್ತೈದೆಯಾಗಿ ಕಂಗೊಳಿಸುತ್ತೆ. ಪಶ್ಚಿಮ ಘಟ್ಟಗಳ ಸಾಲಿನ ಜಿಟಿ ಜಿಟಿ ಮಳೆ ಕಾಫಿನಾಡಿನಲ್ಲಿ ಹೊಸದೊಂದು ಲೋಕವನ್ನೇ ಸೃಷ್ಟಿಸಿರುತ್ತದೆ.
ಈ ಎಲ್ಲಾ ಸೌಂದರ್ಯದ ಮಧ್ಯೆ ಕಾಡಿನ ನಡುವೆ ಹಲವಾರು ಚಿಕ್ಕ ಚಿಕ್ಕ ಜಲಪಾತಗಳು ಸೃಷ್ಟಿಯಾಗಿವೆ. ಆ ಸರಿಸಾಟಿ ಇಲ್ಲದ ಜಲಪಾತಗಳ ಸೌಂದರ್ಯದ ಸಾಲಿನಲ್ಲಿ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ತಪ್ಪಲಿನ ಅಬ್ಬುಗುಡಿಗೆ ಜಲಪಾತ ಕೂಡ ಸೇರಿಕೊಂಡಿದೆ.
ರಾಜ್ಯ ಸರ್ಕಾರ ಈ ಜಲಪಾತಕ್ಕೆ ಮೂಲಭೂತ ಸೌಕರ್ಯ ನೀಡಿದ್ರೆ ಕಾಡಂಚಿನ ಜಲಪಾತ ಪ್ರವಾಸಿಗರ ಹಾಟ್‌ಸ್ಪಾಟ್ ಆಗೋದು ಗ್ಯಾರಂಟಿ ಎನ್ನಲಾಗಿದೆ.
ಕಾಡಿನ ಮಧ್ಯದಲ್ಲಿರುವ ಈ ಜಲಪಾತಕ್ಕೆ ಸೂಕ್ತ ರಸ್ತೆ ವ್ಯವಸ್ಥೆ ಇಲ್ಲ. ಕಾಡಿನ ಮಧ್ಯೆ ಅಲ್ಲಲ್ಲಿ ನಾಮಫಲಕಗಳಿವೆ. ಆದರೆ ರಸ್ತೆ ಮಾತ್ರ ಸಮರ್ಪಕವಾಗಿಲ್ಲ ಎಂದು ಪ್ರವಾಸಿಗರು ಬೇಸರ ವ್ಯಕ್ತಪಡಿಸಿದ್ದಾರೆ.
ಈ ಜಲಪಾತ ಮಳೆಯಿಂದ ತುಂಬಿ ತುಳುಕುತ್ತಿದ್ದು, ಮೈದುಂಬಿ ಹರಿಯುತ್ತಿದೆ. ಈ ಮೂಲಕ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ. ಈ ಹಿನ್ನೆಲೆಯಲ್ಲಿ ಜಲಪಾತಕ್ಕೆ ಭೇಟಿ ನೀಡುವ ಪ್ರವಾಸಿಗರು ಸಖತ್ ಎಂಜಾಯ್ ಮಾಡುತ್ತಿದ್ದಾರೆ.
ಇದರ ಜೊತೆ ಜೊತೆಗೆ ಚಿಕ್ಕಮಗಳೂರಿನ ಅನೇಕ ಫಾಲ್ಸ್‌ಗಳಿಗೆ ಈಗ ಜೀವಕಳೆ ಬಂದಂತಾಗಿದ್ದು, ಪ್ರವಾಸಿಗರ ಸಂಖ್ಯೆ ಬಹಳ ಹೆಚ್ಚಾಗಿದೆ. ಈ ಮೂಲಕ ಚಿಕ್ಕಮಗಳೂರಿಗೆ ಭೇಟಿ ನೀಡುತ್ತಿರುವ ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…