Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಭಾರೀ ಮಳೆಗೆ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆ

ಮಂಗಳೂರು: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನ ಕುಕ್ಕೆ ಸುಬ್ರಹಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿದೆ.

ಘಟ್ಟ ಪ್ರದೇಶ, ಕುಮಾರಪರ್ವತ ಸೇರಿದಂತೆ ಸುಬ್ರಹ್ಮಣ್ಯ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕಳೆದ ರಾತ್ರಿ ಸುರಿದ ನಿರಂತರ ಮಳೆಯಿಂದಾಗಿ ಕುಮಾರಧಾರ ನದಿ ತುಂಬಿ ಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಕುಮಾರಧಾರ ಕಿಂಡಿ ಅಣೆಕಟ್ಟು ಸಂಪೂರ್ಣ ಭರ್ತಿಯಾಗಿದೆ. ಕುಮಾರಧಾರ ಉಪನದಿ ದರ್ಪಣ ತೀರ್ಥ ಕೂಡ ತುಂಬಿ ಹರಿಯುತ್ತಿದೆ.

ಕುಮಾರಧಾರ ಕಿಂಡಿ ಅಣೆಕಟ್ಟು ಸಂಪೂರ್ಣ ಮುಳುಗಡೆಯಾಗಿದ್ದು, ಕುಮಾರಧಾರ ನದಿಗೆ ಇಳಿಯದಂತೆ ಭಕ್ತರಿಗೆ ಸೂಚನೆ ನೀಡಲಾಗಿದೆ.

ನಿರಂತರ ಸುರಿಯುತ್ತಿರುವ ಮಳೆಗೆ ಕುಮಾರಧಾರ ತುಂಬಿ ಹರಿಯುತ್ತಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ನದಿ ತೀರದಲ್ಲಿ ದೇವಳದ ಭದ್ರತಾ ಸಿಬ್ಬಂದಿ, ಹೋಮ್‌ ಗಾರ್ಡ್‌ಗಳನ್ನು ನಿಯೋಜಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಭಕ್ತರಿಗೆ ಎಚ್ಚರಿಕೆ ನೀಡಿರುವ ಜಿಲ್ಲಾಡಳಿತ ಸ್ನಾನಘಟ್ಟದ ಬಳಿ ಯಾರೂ ಕೂಡ ಹೋಗಬಾರದು. ನೀರು ಕಡಿಮೆಯಾದರಷ್ಟೇ ಅಲ್ಲಿಗೆ ಹೋಗಲು ಅನುಮತಿ ನೀಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

Tags: