ಮಂಗಳೂರು: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನ ಕುಕ್ಕೆ ಸುಬ್ರಹಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿದೆ.
ಘಟ್ಟ ಪ್ರದೇಶ, ಕುಮಾರಪರ್ವತ ಸೇರಿದಂತೆ ಸುಬ್ರಹ್ಮಣ್ಯ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕಳೆದ ರಾತ್ರಿ ಸುರಿದ ನಿರಂತರ ಮಳೆಯಿಂದಾಗಿ ಕುಮಾರಧಾರ ನದಿ ತುಂಬಿ ಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಕುಮಾರಧಾರ ಕಿಂಡಿ ಅಣೆಕಟ್ಟು ಸಂಪೂರ್ಣ ಭರ್ತಿಯಾಗಿದೆ. ಕುಮಾರಧಾರ ಉಪನದಿ ದರ್ಪಣ ತೀರ್ಥ ಕೂಡ ತುಂಬಿ ಹರಿಯುತ್ತಿದೆ.
ಕುಮಾರಧಾರ ಕಿಂಡಿ ಅಣೆಕಟ್ಟು ಸಂಪೂರ್ಣ ಮುಳುಗಡೆಯಾಗಿದ್ದು, ಕುಮಾರಧಾರ ನದಿಗೆ ಇಳಿಯದಂತೆ ಭಕ್ತರಿಗೆ ಸೂಚನೆ ನೀಡಲಾಗಿದೆ.
ನಿರಂತರ ಸುರಿಯುತ್ತಿರುವ ಮಳೆಗೆ ಕುಮಾರಧಾರ ತುಂಬಿ ಹರಿಯುತ್ತಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ನದಿ ತೀರದಲ್ಲಿ ದೇವಳದ ಭದ್ರತಾ ಸಿಬ್ಬಂದಿ, ಹೋಮ್ ಗಾರ್ಡ್‌ಗಳನ್ನು ನಿಯೋಜಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಭಕ್ತರಿಗೆ ಎಚ್ಚರಿಕೆ ನೀಡಿರುವ ಜಿಲ್ಲಾಡಳಿತ ಸ್ನಾನಘಟ್ಟದ ಬಳಿ ಯಾರೂ ಕೂಡ ಹೋಗಬಾರದು. ನೀರು ಕಡಿಮೆಯಾದರಷ್ಟೇ ಅಲ್ಲಿಗೆ ಹೋಗಲು ಅನುಮತಿ ನೀಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…