Mysore
27
scattered clouds
Light
Dark

ಗುಜರಾತ್‌ನಲ್ಲಿ ಭಾರೀ ಮಳೆಗೆ ಏಳು ಮಂದಿ ಸಾವು

ಅಹಮದಾಬಾದ್:‌ ಗುಜರಾತ್‌ನ ವಿವಿಧ ಭಾಗಗಳಲ್ಲಿ ಸತತ ನಾಲ್ಕನೇ ದಿನವಾದ ಇಂದು ಕೂಡ ಭಾರೀ ಮಳೆಯಾಗುತ್ತಿದೆ.

ಮಳೆ ಸಂಬಂಧಿತ ಘಟನೆಗಳಲ್ಲಿ ಕನಿಷ್ಠ ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರೀ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಹಲವು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ನಿರಂತರ ಮಳೆಯ ನಡುವೆ ಅಣೆಕಟ್ಟುಗಳು ಮತ್ತು ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಿದ ಕಾರಣ 6000ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

ಅಧಿಕಾರಿಗಳ ಪ್ರಕಾರ ಕಳೆದ ಸೋಮವಾರ ಮಳೆ ಸಂಬಂಧಿತ ಘಟನೆಗಳಲ್ಲಿ ಏಳು ಜನರು ಪ್ರಾಣ ಕಳೆದುಕೊಂಡಿದ್ದಾರೆ. ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಲಾಗಿದೆ ಎಂದು ತಿಳಿಸಿದ್ದಾರೆ.