Mysore
20
overcast clouds
Light
Dark

ರಾಜ್ಯದಲ್ಲಿ ತಗ್ಗದ ಮಳೆ ಅಬ್ಬರ: ಇನ್ನೂ ನಾಲ್ಕು ದಿನ ಭಾರೀ ಮಳೆಯಾಗುವ ಮುನ್ಸೂಚನೆ

ಬೆಂಗಳೂರು: ರಾಜ್ಯದ ವಿವಿಧೆಡೆ ನಾಳೆಯೂ ಮಳೆ ಮುಂದುವರಿಯಲಿದ್ದು, ಐದು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗೆ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಈ ಜಿಲ್ಲೆಗಳಲ್ಲಿ ಭಾರೀ ಗಾಳಿಯೊಂದಿಗೆ ನಿರಂತರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಉಳಿದ ಜಿಲ್ಲೆಗಳಲ್ಲೂ ಕೂಡ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದ್ದು, ಜನತೆ ಎಚ್ಚರಿಕೆ ವಹಿಸಬೇಕಾಗಿ ಸೂಚನೆ ನೀಡಿದೆ.

ಹಾಸನ, ಮೈಸೂರು ಜಿಲ್ಲೆಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಈ ಜಿಲ್ಲೆಗಳಲ್ಲೂ ಕೂಡ ಗಾಳಿ ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಸೂಚನೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗಾಳಿಯ ವೇಗವು 40ರಿಂದ 50 ಕಿ.ಮೀ ತಲುಪುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

ಇನ್ನು ಶುಕ್ರವಾರ ರಾಜ್ಯದ ವಿವಿಧೆಡೆ ಭಾರೀ ಮಳೆಯಾಗಲಿದ್ದು, ಅಂದು ಕರಾವಳಿಯ ಮೂರು ಜಿಲ್ಲೆಗಳು ಸೇರಿದಂತೆ ಏಳು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಹಾಗೂ ಬೆಳಗಾವಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಧಾರಾಕಾರ ಮಳೆಯಾಗಲಿದ್ದು, ನದಿ ಪಾತ್ರದಲ್ಲಿ ಇನ್ನೂ ಹೆಚ್ಚಿನ ಪ್ರವಾಹ ಪರಿಸ್ಥಿತಿ ಎದುರಾಗಲಿದೆ. ಈ ಹಿನ್ನೆಲೆಯಲ್ಲಿ ಜನತೆ ಬಹಳ ಎಚ್ಚರಿಕೆ ವಹಿಸಬೇಕು. ಮಳೆಯಿಂದ ತುಂಬಿ ಹರಿಯುತ್ತಿರುವ ನದಿಗಳ ಬಳ ತೆರಳಬಾರದು ಎಂದು ಸೂಚನೆ ನೀಡಲಾಗಿದೆ.