ಬೆಂಗಳೂರು: ರಾಜ್ಯದ ವಿವಿಧೆಡೆ ನಾಳೆಯೂ ಮಳೆ ಮುಂದುವರಿಯಲಿದ್ದು, ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಜಿಲ್ಲೆಗಳಲ್ಲಿ ಭಾರೀ ಗಾಳಿಯೊಂದಿಗೆ ನಿರಂತರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಉಳಿದ ಜಿಲ್ಲೆಗಳಲ್ಲೂ ಕೂಡ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದ್ದು, ಜನತೆ ಎಚ್ಚರಿಕೆ ವಹಿಸಬೇಕಾಗಿ ಸೂಚನೆ ನೀಡಿದೆ.
ಹಾಸನ, ಮೈಸೂರು ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಈ ಜಿಲ್ಲೆಗಳಲ್ಲೂ ಕೂಡ ಗಾಳಿ ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಸೂಚನೆ ನೀಡಲಾಗಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗಾಳಿಯ ವೇಗವು 40ರಿಂದ 50 ಕಿ.ಮೀ ತಲುಪುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
ಇನ್ನು ಶುಕ್ರವಾರ ರಾಜ್ಯದ ವಿವಿಧೆಡೆ ಭಾರೀ ಮಳೆಯಾಗಲಿದ್ದು, ಅಂದು ಕರಾವಳಿಯ ಮೂರು ಜಿಲ್ಲೆಗಳು ಸೇರಿದಂತೆ ಏಳು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಬೆಳಗಾವಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಧಾರಾಕಾರ ಮಳೆಯಾಗಲಿದ್ದು, ನದಿ ಪಾತ್ರದಲ್ಲಿ ಇನ್ನೂ ಹೆಚ್ಚಿನ ಪ್ರವಾಹ ಪರಿಸ್ಥಿತಿ ಎದುರಾಗಲಿದೆ. ಈ ಹಿನ್ನೆಲೆಯಲ್ಲಿ ಜನತೆ ಬಹಳ ಎಚ್ಚರಿಕೆ ವಹಿಸಬೇಕು. ಮಳೆಯಿಂದ ತುಂಬಿ ಹರಿಯುತ್ತಿರುವ ನದಿಗಳ ಬಳ ತೆರಳಬಾರದು ಎಂದು ಸೂಚನೆ ನೀಡಲಾಗಿದೆ.
ಬೆಂಗಳೂರು: ನವೆಂಬರ್ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…
ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…
ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…
ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…
ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…