Mysore
23
clear sky

Social Media

ಶನಿವಾರ, 18 ಏಪ್ರಿಲ 2026
Light
Dark

ಏಪ್ರಿಲ್.‌15ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಏಪ್ರಿಲ್.‌15ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದ್ದು, ಉತ್ತರ ಒಳನಾಡಿನಲ್ಲಿ ಶುಷ್ಕ ವಾತಾವರಣ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು, ಮೈಸೂರು, ಚಾಮರಾಜನಗರ, ಕೊಡಗು ಜಿಲ್ಲೆಯ ಕೆಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಂಭವ ಇದೆ. ಉತ್ತರ ಒಳನಾಡಿನ ಕಲಬುರ್ಗಿ, ಬೆಳಗಾವಿ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ ಎಂದು ಹೇಳಲಾಗಿದೆ.

Tags:
error: Content is protected !!