ಬೆಂಗಳೂರು: ರಾಜ್ಯದಲ್ಲಿ ಮಳೆರಾಯ ಅಬ್ಬರಿಸಿ, ಬೊಬ್ಬಿರಿಯುತ್ತಿದ್ದು, ಇನ್ನೂ ಎರಡು ದಿನಗಳ ಕಾಲ ಮಳೆ ಆರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ, ಮಲೆನಾಡು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಎರಡು ದಿನಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಮುನ್ನೆಚ್ಚರಿಕೆಯಾಗಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಇನ್ನು ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ, ಹಾಸನ, ಮೈಸೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಮಂಡ್ಯ, ಕೊಪ್ಪಳ, ಬೀದರ್, ಕಲಬುರ್ಗಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇನ್ನು ನೆರೆಯ ಕೇರಳದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕೇರಳದ ಕಾಸರಗೋಡು, ಕಣ್ಣೂರು, ವಯನಾಡು, ಕೋಝಿಕ್ಕೋಡ್ ಮತ್ತು ಮಲಪ್ಪುರಂ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಇನ್ನುಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…
ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…
ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…