ರಾಜ್ಯ

ರಾಜ್ಯದಲ್ಲಿ ಮುಂದುವರಿದ ಮಳೆಯ ಆರ್ಭಟ: 5 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮಳೆರಾಯ ಅಬ್ಬರಿಸಿ, ಬೊಬ್ಬಿರಿಯುತ್ತಿದ್ದು, ಇನ್ನೂ ಎರಡು ದಿನಗಳ ಕಾಲ ಮಳೆ ಆರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ, ಮಲೆನಾಡು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಎರಡು ದಿನಗಳ ಕಾಲ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಮುನ್ನೆಚ್ಚರಿಕೆಯಾಗಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಇನ್ನು ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ, ಹಾಸನ, ಮೈಸೂರು ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದ್ದು, ಮಂಡ್ಯ, ಕೊಪ್ಪಳ, ಬೀದರ್‌, ಕಲಬುರ್ಗಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಇನ್ನು ನೆರೆಯ ಕೇರಳದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, 5 ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಕೇರಳದ ಕಾಸರಗೋಡು, ಕಣ್ಣೂರು, ವಯನಾಡು, ಕೋಝಿಕ್ಕೋಡ್‌ ಮತ್ತು ಮಲಪ್ಪುರಂ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಇನ್ನುಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಶತಕ ಬಾರಿಸಿದ ಸಿಎಂ ಎದುರು ಸವಾಲುಗಳೂ ಇವೆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…

13 hours ago

ಎಐ; ಮನುಕುಲದ ವಿನಾಶಕ್ಕೆ ಕಾರಣವಾಗಲಿದೆಯೇ?

ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…

13 hours ago

ರಾಜ್ಯದಲ್ಲಿ ೧೯೮೩ರ ಇತಿಹಾಸ ಮರುಕಳಿಸುತ್ತದೆಯೇ?

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…

13 hours ago

ಕೆಎಚ್‌ಬಿ ಕಾಲೋನಿ ನಿವಾಸಿಗಳ ಜೀವನ ಹೈರಾಣ

ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…

13 hours ago

ಗಣೇಶೋತ್ಸವಕ್ಕೆ ಡಿಜೆ ನಿಷೇಧ: ಮಿಶ್ರ ಪ್ರತಿಕ್ರಿಯೆ

ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…

13 hours ago

50 ವರ್ಷಗಳ ನಂತರ ಮೊದಲ ಬಾರಿ ಬರಿದಾದ ಕಾರಿಗನಹಳ್ಳಿ ಅಣೆಕಟ್ಟೆ

ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ  ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…

13 hours ago