ಚೆನ್ನೈ: ಕರ್ನಾಟಕದ ಕಬಿನಿ ಹಾಗೂ ಕೆಆರ್‌ಎಸ್ ಜಲಾಶಯಗಳಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಟ್ಟಿರುವ ಹಿನ್ನೆಲೆಯಲ್ಲಿ ತಮಿಳುನಾಡಿನ ಸ್ಟ್ಯಾನ್ಲಿ ಜಲಾಶಯ ಭರ್ತಿಯತ್ತ ಸಾಗಿದೆ.
ಜಲಾಶಯದ ಒಳಹರಿವು 70 ಸಾವಿರ ಕ್ಯೂಸೆಕ್ಸ್‌ಗಳಾಗಿದ್ದು, ಹೊರಹರಿವನ್ನು 1000 ಕ್ಯೂಸೆಕ್ಸ್‌ಗಳಿಗೆ ಏರಿಕೆ ಮಾಡಲಾಗಿದೆ.
ಧರ್ಮಪುರಿ ಜಿಲ್ಲೆಯಲ್ಲಿ ಹೊಗೇನಕಲ್ ಜಲಪಾತ ಮೈದುಂಬಿ ಹರಿಯುತ್ತಿರುವ ಪರಿಣಾಮ ಮೆಟ್ಟೂರು ಜಲಾಶಯ ಸಂಪೂರ್ಣ ಭರ್ತಿಯಾಗಲಿದೆ.
ಕರ್ನಾಟಕದ ಕೆಆರ್‌ಎಸ್ ಹಾಗೂ ಕಬಿನಿ ಜಲಾಶಯದಿಂದ ಸಾಕಷ್ಟು ನೀರು ಹೊರ ಬಿಡುತ್ತಿರುವ ಕಾರಣ ಮೆಟ್ಟೂರು ಜಲಾಶಯಕ್ಕೆ ಒಳಹರಿವು ಗಣನೀಯವಾಗಿ ಏರಿಕೆಯಾಗಿದೆ.
ಕರ್ನಾಟಕದಿಂದ ತಮಿಳುನಾಡಿಗೆ ಈಗಾಗಲೇ ಸಾಕಷ್ಟು ನೀರು ಹೋಗಿದ್ದು, ಈ ವರ್ಷವಾದರೂ ಕಾವೇರಿ ನದಿ ವಿವಾದ ತಣ್ಣಗಾಗಲಿದೆ ಎನ್ನಲಾಗುತ್ತಿದೆ.