Mysore
24
overcast clouds

Social Media

ಶುಕ್ರವಾರ, 18 ಏಪ್ರಿಲ 2025
Light
Dark

ಆಗಸ್ಟ್.12ರವರೆಗೆ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಆಗಸ್ಟ್.‌12ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಆಗಸ್ಟ್‌ ಮತ್ತು ಸೆಪ್ಟೆಂಬರ್‌ನಲ್ಲಿ ದೇಶದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಒಂದು ವೇಳೆ ನಿರೀಕ್ಷೆಗೂ ಮೀರಿ ಮಳೆ ಬಂದರೆ ಅವಾಂತರಗಳು ಸಂಭವಿಸುವ ಸಾಧ್ಯತೆಯಿದೆ.

ಇನ್ನೂ ರಾಜ್ಯದಲ್ಲಿ ಮುಂದಿನ 24 ಗಂಟೆ ಬೆಂಗಳೂರು ಸೇರಿದಂತೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಲಾಗಿದೆ.

ಅದರಲ್ಲೂ ಮಲೆನಾಡು ಮತ್ತು ಕರಾವಳಿ ಪ್ರದೇಶ ಸೇರಿದಂತೆ ಬೆಂಗಳೂರಿನಲ್ಲೂ ಮಳೆ ಆರ್ಭಟ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಸಂಜೆ ಸಮಯದಲ್ಲಿ ಭಾರೀ ಮಳೆ ಬೀಳುವ ಮುನ್ನೆಚ್ಚರಿಕೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ ನೀಡಲಾಗಿದೆ.

ಇನ್ನುಳಿದಂತೆ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಇಂದು ಕೂಡ ಮಳೆ ಮುಂದುವರಿಯಲಿದೆ.

ಇನ್ನೂ ಆಗಸ್ಟ್‌ ಮತ್ತು ಸೆಪ್ಟೆಂಬರ್‌ನಲ್ಲಿ ದೇಶದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಒಂದು ವೇಳೆ ನಿರೀಕ್ಷೆಗೂ ಮೀರಿ ಮಳೆ ಬಂದರೆ ಅವಾಂತರಗಳು ಸಂಭವಿಸುವ ಸಾಧ್ಯತೆಗಳಿವೆ. ಹೀಗಾಗಿ ಜನರು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.

 

 

 

Tags: