ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಆಗಸ್ಟ್.12ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ದೇಶದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಒಂದು ವೇಳೆ ನಿರೀಕ್ಷೆಗೂ ಮೀರಿ ಮಳೆ ಬಂದರೆ ಅವಾಂತರಗಳು ಸಂಭವಿಸುವ ಸಾಧ್ಯತೆಯಿದೆ.
ಇನ್ನೂ ರಾಜ್ಯದಲ್ಲಿ ಮುಂದಿನ 24 ಗಂಟೆ ಬೆಂಗಳೂರು ಸೇರಿದಂತೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಲಾಗಿದೆ.
ಅದರಲ್ಲೂ ಮಲೆನಾಡು ಮತ್ತು ಕರಾವಳಿ ಪ್ರದೇಶ ಸೇರಿದಂತೆ ಬೆಂಗಳೂರಿನಲ್ಲೂ ಮಳೆ ಆರ್ಭಟ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಸಂಜೆ ಸಮಯದಲ್ಲಿ ಭಾರೀ ಮಳೆ ಬೀಳುವ ಮುನ್ನೆಚ್ಚರಿಕೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ ನೀಡಲಾಗಿದೆ.
ಇನ್ನುಳಿದಂತೆ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಇಂದು ಕೂಡ ಮಳೆ ಮುಂದುವರಿಯಲಿದೆ.
ಇನ್ನೂ ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ದೇಶದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಒಂದು ವೇಳೆ ನಿರೀಕ್ಷೆಗೂ ಮೀರಿ ಮಳೆ ಬಂದರೆ ಅವಾಂತರಗಳು ಸಂಭವಿಸುವ ಸಾಧ್ಯತೆಗಳಿವೆ. ಹೀಗಾಗಿ ಜನರು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…