ಕಾರವಾರ: ಕಾರವಾರದ ಮೂಲಕ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಸೇತುವೆ ಕುಸಿದು ಬಿದ್ದಿದ್ದು, ಲಾರಿಯೊಂದು ನದಿಗೆ ಬಿದ್ದಿದೆ.
ಕಾರವಾಡ ಗೋವಾ ಸಂಪರ್ಕ ಮಾಡುವ ಕೋಡಿಭಾಗ್ ಬಳಿ ಇರುವ ಈ ಸೇತುವೆ ತಡರಾತ್ರಿ ಕುಸಿದು ಬಿದ್ದಿದೆ. ಫಿಲ್ಲರ್ ಕಂಬಗಳ ನಡುವೆ ಸೇತುವೆ ಮೂರ್ನಾಲ್ಕು ಕಡೆ ತುಂಡಾಗಿ ನದಿಗೆ ಬಿದ್ದಿದ್ದು, ಸೇತುವೆ ತುಂಡಾಗುವ ವೇಳೆಯೇ ಗೋವಾದಿಂದ ಬರುತ್ತಿದ್ದ ಲಾರಿಯೊಂದು ನದಿಗೆ ಬಿದ್ದಿದೆ.
ತಕ್ಷಣ ಎಚ್ಚೆತ್ತ ಮೀನುಗಾರರು ಹಾಗೂ ಪೊಲೀಸರು ಲಾರಿ ಚಾಲಕ ಕೇರಳ ಮೂಲದ ರಾಧಾಕೃಷಣ ನಾಳಾ ಸ್ವಾಮಿ ಎಂಬುವವರನ್ನು ರಕ್ಷಣೆ ಮಾಡಿ ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಇನ್ನು ಘಟನೆ ಸಂಭವಿಸುವ ಮುನ್ನವೇ ಬೈಕ್ ಹಾಗೂ ಕಾರು ಕೂಡ ಸೇತುವೆ ಮೇಲೆ ಸಂಚಾರ ಮಾಡುತ್ತಿತ್ತು ಎನ್ನಲಾಗಿದೆ. ಆದರೆ ಅವೆರಡು ವಾಹನಗಳು ಮುಂದೆ ಸಾಗಿದವು ಎನ್ನಲಾಗಿದೆ. ಸದ್ಯ ಟ್ರಕ್ ನೀರಿನಲ್ಲಿ ಬಿದ್ದಿದ್ದು, ಮತ್ತೆ ಯಾವುದಾದರೂ ವಾಹನ ಬಿದ್ದಿರಬಹುದು ಎಂದು ಮೀನುಗಾರರು ಹಾಗೂ ಅಗ್ನಿ ಶಾಮಕ ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ.
ಈ ಸೇತುವೆ ಕರ್ನಾಟಕ ಹಾಗೂ ಗೋವಾ ರಾಜ್ಯಗಳನ್ನು ಸಂಪರ್ಕಿಸುವ ಪ್ರಮುಖ ಸಂಪರ್ಕ ಸೇತುವೆಯಾಗಿತ್ತು. ಆದರೆ ಈಗ ಹೆಚ್ಚಿನ ಮಳೆಯಿಂದಾಗಿ ಇದು ಕುಸಿದು ಬಿದ್ದಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ಮಂಜಾಗ್ರತೆಯ ಹಿನ್ನೆಲೆಯಲ್ಲಿ ಸದ್ಯಕ್ಕೆ ಹೊಸ ಸೇತುವೆಯ ಮೇಲಿಂದಲೂ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ಹಳೆಯ ಸೇತುವೆ ಕುಸಿದಿರುವ ಪರಿಣಾಮ ಹೊಸ ಸೇತುವೆ ಪರಿಶೀಲನೆಗೆ ಆದೇಶ ಹೊರಡಿಸಲಾಗಿದ್ದು, ಸೇತುವೆ ಪರಿಶೀಲನೆ ನಡೆಸಿ ವಾಹನ ಸಂಚಾರಕ್ಕೆ ತಕ್ಷಣವೇ ಅವಕಾಶ ಕಲ್ಪಿಸುವಂತೆ ಆದೇಶ ನೀಡಲಾಗಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್‌ಆರ್‌ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…
ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…
ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…