Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಕೇರಳದಲ್ಲೂ ಧಾರಾಕಾರ ಮಳೆ: ಕಾಲ್ನಡಿಗೆಯಲ್ಲಿ ಬರುವ ಶಬರಿಮಲೆ ಯಾತ್ರಿಕರಿಗೆ ತಾತ್ಕಾಲಿಕ ನಿಷೇಧ

ತಿರುವನಂತಪುರಂ: ಫೆಂಗಲ್‌ ಚಂಡಮಾರುತದ ಪರಿಣಾಮ ದೇವರ ನಾಡು ಕೇರಳದಲ್ಲೂ ಭಾರೀ ಮಳೆಯಾಗುತ್ತಿದ್ದು, ಮಳೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ಈ ಹಿನ್ನೆಲೆಯಲ್ಲಿ ಶಬರಿಮಲೆಗೆ ಅರಣ್ಯದ ದಾರಿ ಮೂಲಕ ಕಾಲ್ನಡಿಗೆಯಲ್ಲಿ ಬರುವ ಯಾತ್ರಿಕರಿಗೆ ತಾತ್ಕಾಲಿಕವಾಗಿ ನಿಷೇಧ ಹೇರಲಾಗಿದೆ.

ಕರಿಮಲ, ಪುಲ್ಲುಮೇಡು ದಾರಿಯಲ್ಲಿ ಸಂಚಾರ ಮಾಡದಂತೆ ತಡೆಯಲಾಗಿದೆ. ಭೂಕುಸಿತ ಉಂಟಾಗುವ ಸಾಧ್ಯತೆ ಇರುವುದರಿಂದ ಅರಣ್ಯ ಮಾರ್ಗವನ್ನು ಮುಚ್ಚಲಾಗಿದೆ.

ಕಾಲ್ನಡಿಗೆ ಯಾತ್ರಿಕರು ನೀಲಕ್ಕಡ್-ಪಂಬಾ ಮೂಲಕ ಶಬರಿಮಲೆಗೆ ತೆರಳುವಂತೆ ಸೂಚನೆ ನೀಡಲಾಗಿದೆ.

ಪುಲ್ಲುಮೇಡುವಿನಿಂದ ಶಬರಿಮಲೆಗೆ 6 ಕಿ.ಮೀ ದೂರವಿದೆ. ನಿನ್ನೆಯಿಂದ ಈ ಅರಣ್ಯ ದಾರಿಯಲ್ಲಿ ದಟ್ಟ ಮಂಜು ಆವರಿಸಿದ್ದು, ಭಾರೀ ಮಳೆ ಕೂಡ ಬೀಳುತ್ತಿದೆ. ಈ ಹಿನ್ನೆಲೆಯಲ್ಲಿ ಭೂಕುಸಿತವಾಗುವ ಆತಂಕ ಉಂಟಾಗಿದೆ. ಈ ಬೆನ್ನಲ್ಲೇ ಕೇರಳ ಸರ್ಕಾರ ಈ ಕ್ರಮ ಕೈಗೊಂಡಿದ್ದು, ಯಾತ್ರಿಕರು ಇದಕ್ಕೆ ಸಹಕಾರ ನೀಡುವಂತೆ ಕೋರಿದೆ.

ಇನ್ನು ಕೇರಳ ರಾಜ್ಯದಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದ್ದು, ಐದು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

Tags: