ತಿರುವನಂತಪುರಂ: ಫೆಂಗಲ್ ಚಂಡಮಾರುತದ ಪರಿಣಾಮ ದೇವರ ನಾಡು ಕೇರಳದಲ್ಲೂ ಭಾರೀ ಮಳೆಯಾಗುತ್ತಿದ್ದು, ಮಳೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.
ಈ ಹಿನ್ನೆಲೆಯಲ್ಲಿ ಶಬರಿಮಲೆಗೆ ಅರಣ್ಯದ ದಾರಿ ಮೂಲಕ ಕಾಲ್ನಡಿಗೆಯಲ್ಲಿ ಬರುವ ಯಾತ್ರಿಕರಿಗೆ ತಾತ್ಕಾಲಿಕವಾಗಿ ನಿಷೇಧ ಹೇರಲಾಗಿದೆ.
ಕರಿಮಲ, ಪುಲ್ಲುಮೇಡು ದಾರಿಯಲ್ಲಿ ಸಂಚಾರ ಮಾಡದಂತೆ ತಡೆಯಲಾಗಿದೆ. ಭೂಕುಸಿತ ಉಂಟಾಗುವ ಸಾಧ್ಯತೆ ಇರುವುದರಿಂದ ಅರಣ್ಯ ಮಾರ್ಗವನ್ನು ಮುಚ್ಚಲಾಗಿದೆ.
ಕಾಲ್ನಡಿಗೆ ಯಾತ್ರಿಕರು ನೀಲಕ್ಕಡ್-ಪಂಬಾ ಮೂಲಕ ಶಬರಿಮಲೆಗೆ ತೆರಳುವಂತೆ ಸೂಚನೆ ನೀಡಲಾಗಿದೆ.
ಪುಲ್ಲುಮೇಡುವಿನಿಂದ ಶಬರಿಮಲೆಗೆ 6 ಕಿ.ಮೀ ದೂರವಿದೆ. ನಿನ್ನೆಯಿಂದ ಈ ಅರಣ್ಯ ದಾರಿಯಲ್ಲಿ ದಟ್ಟ ಮಂಜು ಆವರಿಸಿದ್ದು, ಭಾರೀ ಮಳೆ ಕೂಡ ಬೀಳುತ್ತಿದೆ. ಈ ಹಿನ್ನೆಲೆಯಲ್ಲಿ ಭೂಕುಸಿತವಾಗುವ ಆತಂಕ ಉಂಟಾಗಿದೆ. ಈ ಬೆನ್ನಲ್ಲೇ ಕೇರಳ ಸರ್ಕಾರ ಈ ಕ್ರಮ ಕೈಗೊಂಡಿದ್ದು, ಯಾತ್ರಿಕರು ಇದಕ್ಕೆ ಸಹಕಾರ ನೀಡುವಂತೆ ಕೋರಿದೆ.
ಇನ್ನು ಕೇರಳ ರಾಜ್ಯದಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದ್ದು, ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…