ವಿಜಯಪುರ: ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ವಿಜಯಪುರ, ಕಲಬುರ್ಗಿ ಸೇರಿದಂತೆ ಉತ್ತರ ಕರ್ನಾಟಕ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.
ಭಾರೀ ಮಳೆಯಿಂದ ಕೃಷಿ ಭೂಮಿ, ಹೆದ್ದಾರಿ ಹಾಗೂ ಅನೇಕ ಗ್ರಾಮಗಳೇ ಜಲಾವೃತಗೊಂಡಿವೆ. ನಿರಂತರ ಮಳೆಯಿಂದ ಭೀಮಾ ನದಿಯ ಅಬ್ಬರ ಹೆಚ್ಚಾಗಿದ್ದು, ಸೇತುವೆಗಳು, ರಸ್ತೆಗಳು ಸಂಪೂರ್ಣ ಮುಳುಗಡೆಯಾಗಿವೆ.
ವರುಣನ ಆರ್ಭಟಕ್ಕೆ ಉತ್ತರ ಕರ್ನಾಟಕ ಭಾಗದ ಬಹುತೇಕ ಜಿಲ್ಲೆಗಳಲ್ಲಿ ಅಲ್ಲೋಲ-ಕಲ್ಲೋಲ ಸೃಷ್ಟಿಯಾಗಿದ್ದು, ಇನ್ನೂ ಮೂರು ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ಕಲಬುರ್ಗಿ ಜಿಲ್ಲೆಯಲ್ಲೂ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಜಿಲ್ಲೆಯಲ್ಲಿ ಮುಂದಿನ 48 ಗಂಟೆಗಳ ಕಾಲ ಧಾರಾಕಾರ ಮಳೆಯಾಗಲಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.





