ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಮೂರು ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.
ಉಡುಪಿ, ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ನಿನ್ನೆಯಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಇನ್ನೂ ಮೂರು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ವಿಜಯನಗರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಕೋಲಾರ, ದಾವಣಗೆರೆ, ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ.




