ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಇಂದು ಗಾಳಿ ಸಹಿತ ಧಾರಾಕಾರ ಮಳೆಯಾಗಲಿದ್ದು, 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಹಾವೇರಿ, ಗದಗ, ಬಳ್ಳಾರಿ, ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಈ ಜಿಲ್ಲೆಗಳಲ್ಲಿ ಗುಡುಡು ಹಾಗೂ ಗಾಳಿ ಸಹಿತ ಧಾರಾಕಾರ ಮಳೆಯಾಗಲಿದ್ದು, ಕೆಲವು ಜಿಲ್ಲೆಗಳಿಗೆ ಸಾಧಾರಣ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಇನ್ನು ಕರಾವಳಿಯಲ್ಲಿ ಗಂಟೆಗೆ 35 ಕಿ.ಮೀನಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.
ಬೆಂಗಳೂರು ಸೇರಿದಂತೆ ಎಂಟು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಇನ್ನೂ ಆರು ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.