ಹೈದರಾಬಾದ್: ತೆಲಂಗಾಣ ಮತ್ತು ನೆರೆಯ ಆಂಧ್ರಪ್ರದೇಶದ ಹಲವಾರು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ಮುಂದಿನ ಮೂರು ದಿನಗಳಲ್ಲಿ ಈ ಭಾಗದಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಧಾರಾಕಾರ ಮಳೆಯಿಂದಾಗಿ ಆಂಧ್ರಪ್ರದೇಶದ ಪ್ರಮುಖ ನಗರ ವಿಜಯವಾಡ ಸಂಪೂರ್ಣ ಜಲಾವೃತಗೊಂಡಿದ್ದು, ರಸ್ತೆಗಳಲ್ಲಿ ಮಳೆಯ ನೀರು ನದಿಯಂತೆ ಹರಿಯುತ್ತಿದೆ. ಇದುವರೆಗೂ ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯದಲ್ಲಿ ಮಳೆಗೆ 8 ಮಂದಿ ಬಲಿಯಾಗಿದ್ದಾರೆ.
ತೆಲಂಗಾಣದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳು ಎಲ್ಲಾ ಕ್ರಮಗಳನ್ನು ಕೈಗೊಂಡಿದ್ದಾರೆ. ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರನ್ನು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚನೆ ನೀಡಲಾಗಿದೆ.
ಭಾರೀ ಮಳೆಯಿಂದ ಜಲಾಶಯಗಳು ಕೂಡ ಸಂಪೂರ್ಣ ಭರ್ತಿಯಾಗಿದ್ದು, ಜಲಾಶಯದ ಗೇಟ್ ತೆರೆಯುವ ಹಿನ್ನೆಲೆಯಲ್ಲಿ ತಗ್ಗು ಪ್ರದೇಶದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ತೆಲಂಗಾಣ ಸರ್ಕಾರವು ಈ ಎಲ್ಲಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ನಾಳೆ ರಾಜ್ಯದಾದ್ಯಂತ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ನೀಡಿ ಆದೇಶ ಹೊರಡಿಸಿದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…