ರಾಜ್ಯ

ತೆಲಂಗಾಣದಲ್ಲಿ ಮುಂದುವರಿದ ಧಾರಾಕಾರ ಮಳೆ: ಜನಜೀವನ ಅಸ್ತವ್ಯಸ್ತ

ಹೈದರಾಬಾದ್:‌ ತೆಲಂಗಾಣ ರಾಜ್ಯದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಳೆ ಸಂಬಂಧಿತ ಅವಘಡಗಳಲ್ಲಿ ಇಲ್ಲಿಯವರೆಗೂ 16 ಮಂದಿ ಸಾವನ್ನಪ್ಪಿದ್ದು, ಹಲವರು ಪ್ರವಾಹದಲ್ಲಿ ಸಿಲುಕಿ ನಾಪತ್ತೆಯಾಗಿದ್ದಾರೆ.

ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ತೆಲಂಗಾಣದ ಹಲವೆಡೆ ಪ್ರವಾಹ ಪರಿಸ್ಥಿತಿ ಏರ್ಪಟ್ಟಿದ್ದು, ಜನತೆ ಕಂಗಾಲಾಗಿದ್ದಾರೆ.

ಮಳೆ ಅವಘಡಗಳಲ್ಲಿ ಮೃತರ ಸಂಬಂಧಿಗಳಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಲಾಗಿದೆ ಎಂದು ಸಿಎಂ ರೇವಂತ್‌ ರೆಡ್ಡಿ ತಿಳಿಸಿದ್ದಾರೆ.

ಅಲ್ಲದೆ, ಪ್ರವಾಹದಿಂದ ಉಂಟಾಗಿರುkವ ಹಾನಿ ಕುರಿತಂತೆ ರಾಜ್ಯ ಸರ್ಕಾರವು ಕೇಂದ್ರಕ್ಕೆ ವರದಿ ಸಲ್ಲಿಸಲಿದೆ. ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯಲು ತೆಲಂಗಾಣ ಸರ್ಕಾರ ನಿರ್ಧರಿಸಿದೆ.

ದನಕರುಗಳು, ಮೇಕೆ ಹಾಗೂ ಕುರಿಗಳನ್ನು ಕಳೆದುಕೊಂಡ ರೈತರಿಗೂ ಪರಿಹಾರ ನೀಡಲಾಗುವುದು ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ತೆಲಂಗಾಣದ ಹಲವೆಡೆ ಪ್ರವಾಹ ಪರಿಸ್ಥಿತಿ ಊಂಟಾಗಿದ್ದು, ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ ಕೇಂದ್ರವನ್ನು ಒತ್ತಾಯಿಸಲು ರೇವಂತ್‌ ರೆಡ್ಡಿ ನಿರ್ಧಾರ ಮಾಡಿದ್ದಾರೆ.

ಇದೆಲ್ಲದರ ನಡುವೆ ಧಾರಾಕಾರ ಮಳೆಯಾಗುತ್ತಿರುವ ಜಿಲ್ಲೆಗಳಲ್ಲಿ ಹೈಅಲರ್ಟ್‌ ಘೋಷಣೆ ಮಾಡಲಾಗಿದ್ದು, ಕಾಲ್‌ ಸೆಂಟರ್‌ಗಳನ್ನು ತೆರೆಯುವಂತೆ ಸೂಚಿಸಲಾಗಿದೆ.

ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನತೆಯನ್ನು ಸುರಕ್ಷಿತ ಸ್ಥಳಕ್ಕೆ ಶಿಫ್ಟ್‌ ಮಾಡಲಾಗಿದ್ದು, ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

9 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

12 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

12 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

12 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

13 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

13 hours ago