ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಾಮರಾಜನಗರ, ಕೊಡಗು ಹಾಗೂ ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಾಳಿಯೊಂದಿಗೆ ಭಾರಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು. ಗುಡುಗು–ಮಿಂಚು ಕಾಣಿಸಿಕೊಂಡಾಗ ಮರಗಳ ಕೆಳಗೆ ಆಶ್ರಯ ಪಡೆಯದೆ ಸುರಕ್ಷಿತ ಕಟ್ಟಡದಲ್ಲಿ ಉಳಿಯಿರಿ. ರೈತರು ಕೃಷಿ ಚಟುವಟಿಕೆಗಳಿಗೆ ತೆರಳುವ ಮುನ್ನ ಸ್ಥಳೀಯ ಹವಾಮಾನ ಮುನ್ಸೂಚನೆಯನ್ನು ಗಮನಿಸುವುದು ಸೂಕ್ತ ಎಂದು ಎಚ್ಚರಿಕೆ ನೀಡಲಾಗಿದೆ.
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ಯಶಸ್ವಿಯಾಗಿ ನೆರವೇರಿದ ಬೆನ್ನಲ್ಲೇ, ದಸರಾ ಗಜಪಡೆ ನಾಡಿನಿಂದ ಕಾಡಿನತ್ತ ಹೊರಟಿವೆ. ಮೈಸೂರು ಅರಮನೆಯ…
ಯಳಂದೂರು: ತಾಲ್ಲೂಕಿನ ಮಾಂಬಳ್ಳಿ ಗ್ರಾಮದಲ್ಲಿ ಚಿರತೆಯ ಹೆಜ್ಜೆ ಗುರುತುಗಳು ಪತ್ತೆಯಾಗಿದ್ದು, ರೈತರು ಹಾಗೂ ಕೃಷಿ ಕೂಲಿ ಕಾರ್ಮಿಕರಲ್ಲಿ ಆತಂಕ ಮೂಡಿಸಿದೆ.…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಯಶಸ್ವಿಯಾಗಿ ನೆರವೇರಿದ್ದು, ಇಂದು ಬೀಳ್ಕೊಡುಗೆ ಕಾರ್ಯಕ್ರಮಕ್ಕೂ ಮುನ್ನ ದಸರಾ ಗಜಪಡೆಗೆ…
ಮಂಡ್ಯ ನಗರದ ಬನ್ನೂರು ರಸ್ತೆಯಲ್ಲಿ ಎಂವಿಜಿ ಬೇಕರಿಯಿಂದ ಗೌರಿಶಂಕರ ಕಲ್ಯಾಣ ಮಂಟಪದವರೆಗೆ ಇರುವ ರಸ್ತೆಗೆ ಫುಟ್‌ಪಾತ್ ಅನ್ನೇ ನಿರ್ಮಿಸಿಲ್ಲ. ಈ…
ಸಾಮಾಜಿಕ ಜಲತಾಣಗಳು ಇಂದು ವದಂತಿ ಮತ್ತು ವ್ಯಕ್ತಿ ನಿಂದನೆಯ ಅಖಾಡವಾಗಿ ಮಾರ್ಪಟ್ಟಿರುವುದು ತೀವ್ರ ಕಳವಳಕಾರಿ ಸಂಗತಿ. ಸತ್ಯಾಸತ್ಯತೆಯನ್ನು ಒರೆಗೆ ಹಚ್ಚದೆ,…
ಸಹಪ್ರಯಾಣಿಕರ ಹಿತಾಸಕ್ತಿ ಕಾಪಾಡಲು ಭಾರತೀಯ ರೈಲ್ವೆ ಮೊಬೈಲ್ ಸ್ಪೀಕರ್ ಬಳಕೆ ಮತ್ತು ಜೋರಾಗಿ ಮಾತನಾಡುವುದರ ವಿರುದ್ಧ ಕಠಿಣ ನಿಯಮ ಜಾರಿಗೊಳಿಸಿರುವುದು…