Mysore
20
broken clouds

Social Media

ಗುರುವಾರ, 13 ನವೆಂಬರ್ 2025
Light
Dark

ರಾಜ್ಯಾದ್ಯಂತ ಮುಂದಿನ 4 ದಿನ ಭಾರಿ ಮಳೆ ಸಾಧ್ಯತೆ : ಯಲ್ಲೊ ಅಲರ್ಟ್‌

Rain Intensifies; Red Alert Issued

ಬೆಂಗಳೂರು : ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯ ಹಾಗೂ ಉತ್ತರ ಒಳನಾಡಿನಲ್ಲಿ ನೈರುತ್ಯ ಮಾನ್ಸೂನ್ ದುರ್ಬಲವಾಗಿತ್ತು. ಇದರಿಂದ ಮಂಗಳವಾರ ರಾಜ್ಯದ ಕೆಲವು ಸ್ಥಳಗಳಲ್ಲಿ ಮಳೆಯಾಗಿದೆ. ಹಾಗೆಯೇ ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ.

ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ:-ನರೇಗಾ ಯೋಜನೆಯಡಿ ಕಾರ್ಮಿಕ ಆಯವ್ಯಯಕ್ಕೆ ಸಿದ್ದತೆ : ಗ್ರಾ.ಪಂʼಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

ಅ.16ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು ಜಿಲ್ಲೆಗಳಲ್ಲಿ ಭಾರಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಅ.17ರಂದು ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲ್ಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಇನ್ನು ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕ ಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

Tags:
error: Content is protected !!